ಚಿತ್ರದುರ್ಗ:
ನಡೆದಾಡುವ ದೇವರು, ಶತಾಯುಷಿ, ತ್ರಿವಿದ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆಯಿರುವುದನ್ನು ಗೌರವಿಸಿದೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಇಲಾಖೆಯ ವತಿಯಿಂದ ಮಂಗಳವಾರ ಸಂವಿಧಾನ ಸಂಭಾಷಣೆ ಕಾರ್ಯಕ್ರಮ ನಡೆಸಿರುವುದನ್ನು ವಿರೋಧಿಸಿ ಬಿಜೆಪಿ.ಯಿಂದ ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಲಿಂಗೈಕ್ಯ ಶ್ರೀಗಳ ಗೌರವಾರ್ಥವಾಗಿ ಮೂರು ದಿನಗಳ ಕಾಲ ಶೋಕಾಚರಣೆಯಿರುವುದರಿಂದ ಯಾವುದೆ ಕಾರ್ಯಕ್ರಮಗಳನ್ನು ನಡೆಸಬಾರದೆಂದು ತಿಳಿದಿದ್ದರೂ ನಮಗೇನು ಸಂಬಂಧವಿಲ್ಲವೇನೋ ಎನ್ನುವ ರೀತಿಯಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ವರ್ತಿಸಿರುವುದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್‍ನೊಂದಿಗೆ ಶ್ಯಾಮೀಲಾಗಿರುವ ಪ್ರಜಾಪ್ರಭುತ್ವ ವಿರೋಧಿ ಕನ್ನಯ್ಯಕುಮಾರ್‍ನಂತ ದೇಶದ್ರೋಹಿಯನ್ನು ಆಹ್ವಾನಿಸಿ ನಾಡಿಗೆ ಅವಮಾನ ಮಾಡಿರುವುದರಿಂದ ಕೂಡಲೆ ಸಚಿವ ಪ್ರಿಯಾಂಕ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿ ಪ್ರಕಟಿಸಿರುವ ಮಾಧ್ಯಮದವರನ್ನು ಭಯೋತ್ಪಾದಕರಿಗೆ ಹೋಲಿಸಿರುವ ಸಚಿವ ಪ್ರಿಯಾಂಕ ಖರ್ಗೆ ದುರ್ವತೆನೆಯನ್ನು ಖಂಡಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಹೊರಡಿಸಿರುವುದನ್ನು ಧಿಕ್ಕರಿಸಿ ಬೇಜವಾಬ್ದಾರಿಯಿಂದ ವರ್ತಿಸಿರುವ ಸಚಿವ ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ಕೈಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದೆಂದು ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯನ್ನುಎಚ್ಚರಿಸಿದರು.
ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಖಜಾಂಚಿ ನರೇಂದ್ರ, ಶಿವಣ್ಣಾಚಾರ್, ವೆಂಕಟೇಶ್‍ಯಾದವ್, ಸಂಪತ್‍ಕುಮಾರ್, ರೇಖ, ಶಂಭು, ಸಾಗರ್, ಸತ್ಯನಾರಾಯಣ, ನಗರಸಭಾ ಸದಸ್ಯರುಗಳಾದ ಹರೀಶ್, ರೋಹಿಣಿ ನವೀನ್ ಚಾಲುಕ್ಯ, ಅನುರಾಧ ರವಿಕುಮಾರ್, ನವೀನ್ ಚಾಲುಕ್ಯ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
