ಶಿಷ್ಟಾಚಾರ ಉಲ್ಲಂಘನೆ ಆವರಗೊಳ್ಳ ಗ್ರಾಮಸ್ಥರ ಆರೋಪ

ದಾವಣಗೆರೆ:

        ಆವರಗೊಳ್ಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋಮಾಳದ ಜಮೀನಿನಲ್ಲಿ ಕೇಂದ್ರ ಸರ್ಕಾರದಿಂದ ನಿರ್ಮಿಸಿರುವ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಆವರಗೊಳ್ಳ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಜಿ.ಟಿ.ವೀರಣ್ಣ ಆರೋಪಿಸಿದರು.

         ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧ್ಯಕ್ಷರು, ಜಿಪಂ, ಅಧ್ಯಕ್ಷರು, ಸದಸ್ಯರು, ಗ್ರಾಪಂ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಸಕರನ್ನು ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ಸೌಜನ್ಯಕ್ಕೂ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ದೂರಿದರು.

          ಶಾಲೆಯವರು ಸಂಸದರನ್ನು ಮಾತ್ರ ಆಹ್ವಾನಿಸುವ ಮೂಲಕ ಸರ್ಕಾರಿ ಕಾರ್ಯಕ್ರಮವನ್ನು ಬಿಜೆಪಿ ಪಕ್ಷಕ್ಕೆ ಸೀಮಿತರಾಗಿದ್ದೇವೆ ಎಂಬಂತೆ ವರ್ತಿಸಿರುವುದು ಖಂಡನೀಯ. ಈ ವಿಚಾರದಲ್ಲಿ ರಾಜಕೀಯ ಮಾಡಿರುವುದು ಕಂಡುಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

          ಆವರಗೊಳ್ಳದ ಸರ್ವೇ ನಂಬರ್‍ನಲ್ಲೇ ಶಾಲೆ ಇದೆ. ಆದರೆ ಗ್ರಾಮದ ಹೆಸರನ್ನು ಎಲ್ಲಿಯೂ ನಮೂದಿಸಿಲ್ಲ, ಇದು ಇಡೀ ಗ್ರಾಮಸ್ಥರಿಗೆ ಮಾಡಿರುವ ಅಪಮಾನವಾಗಿದೆ. ಈ ಕೂಡಲೇ ಶಾಲೆಯ ಪ್ರಾಂಶುಪಾಲರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಹಾಗೂ ಪಕ್ಷರಹಿತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ಬಸವರಾಜ್, ಎ.ಕೆ. ಬಸವರಾಜಪ್ಪ, ಕೆ.ಎಂ.ವೀರಯ್ಯ, ಬಸವರಾಜಪ್ಪ ಬೊಮ್ಮಯ್ಯ, ಚೇತನ್, ಕಿರಣ್ ಕುಮಾರ್ ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap