ಬೆಂಗಳೂರು
ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇಂದು ಇಲ್ಲಿ ಸಭೆ ಸೇರಿ ವಿವಾದಾತ್ಮಕ ಫ್ರಾನ್ಸ್ ನಿಂದ ರಫೇಲ್ ಯುದ್ಧ ವಿಮಾನ ಖರೀದಿ ವಿಷಯ ಸೇರಿದಂತೆ ರಕ್ಷಣೆ ಮತ್ತು ಸಂಸದೀಯ ವಿಚಾರಗಳ ಬಗ್ಗೆ ಮಹತ್ವದ ನಡೆಸಿತು.
ಹೈದರಾಬಾದ್ ಕರ್ನಾಟಕ ಹಿಂದುಳಿದ ಪ್ರದೇಶದಲ್ಲಿ ಇದೆ ಮೊದಲ ಭಾರಿಗೆ ಎರಡು ದಿನಗಳ ಸಭೆ ನಡೆದಿದೆ. ಲೋಕಸಭಾ ಸದಸ್ಯ ಶಿವಕುಮಾರ್ ಉದಾಸಿ ಸೇರಿದಂತೆ ಹಲವು ಸದಸ್ಯರು ಹಾಜರಿದ್ದರು.
ಸಮಿತಿಯ ತಂಡ ಕಾರ್ಮಿಕ ವಿಮಾನಿಗಮದ ಆಸ್ಪತ್ರೆ, ಕಾಲೇಜು,ವಿಮಾನ ನಿಲ್ದಾಣ ಮತ್ತು ಕೇಂದ್ರಿಯ ವಿಶ್ವವಿದ್ಯಾನಿಲಯಕ್ಕೂ ಭೇಟಿ ನೀಡಿ ರೈಲ್ವೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿತು. ಏಳು ಮಂದಿ ರಾಜ್ಯಸಭಾ ಸದಸ್ಯರು ಸೇರಿ 22 ಸದಸ್ಯರು ಸಭೆಯಲ್ಲಿ ಹಾಜರಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ