ಎಸ್‍ಪಿಎಂಗೆ ಸ್ಪರ್ಧಿಸಲು ಅವಕಾಶ ನೀಡಲು ಒತ್ತಾಯ

ಚಿಕ್ಕನಾಯಕನಹಳ್ಳಿ

       ತುಮಕೂರು ಜಿಲ್ಲೆಯಲ್ಲಿ ಮುದ್ದಹನುಮೆಗೌಡರಿಗೆ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಯ ಟಿಕೆಟ್ ನೀಡಿದರೆ ಕಾಂಗ್ರೆಸ್ ಗೆಲ್ಲುವ ಅವಕಾಶ ಹೆಚ್ಚಿದೆ. ಹಾಗಾಗಿ ವರಿಷ್ಠರು ಕಾಂಗ್ರೆಸ್ ಪಕ್ಷದಿಂದ ಎಸ್.ಪಿ.ಮುದ್ದಹನುಮೇಗೌಡರಿಗೆ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಡಿ.ಚಂದ್ರಶೇಖರ್ ಹೇಳಿದರು.

       ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವಿನ ಅಲೆಯಿದೆ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಜಿಲ್ಲೆಯ ಬಗ್ಗೆ ಪುನರ್ ಪರಿಶೀಲನೆ ಮಾಡಿ ಪಕ್ಷದಿಂದ ಅಭ್ಯರ್ಥಿಯನ್ನಾಗಿ ಮಾಡಿ ಎಸ್.ಪಿ.ಮುದ್ದಹನುಮೇಗೌಡರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ ಅವರು, ಮುದ್ದಹನುಮೇಗೌಡರು ಸಂಸದರಾಗಿ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿ ಜನರ ಪ್ರಶಂಸೆಗಳಿಸಿದ್ದಾರೆ. ಈ ಎಲ್ಲಾ ಅಂಶಗಳು ಸಹ ಎಸ್.ಪಿ.ಎಂ.ರವರ ಗೆಲುವಿಗೆ ಸಹಕಾರಿಯಾಗುತ್ತದೆ ಎಂದರು.

          ಕಾರ್ಯದರ್ಶಿ ಬ್ರಹ್ಮಾನಂದ ಮಾತನಾಡಿ, ತಾಲ್ಲೂಕಿನ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮುದ್ದಹನುಮೇಗೌಡರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಗೆಲುವು ಕಾಣುತ್ತಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಎಸ್.ಪಿ.ಎಂ.ರವರು ಕಳೆದ ಬಾರಿ ಚುನಾವಣೆಯಲ್ಲಿ ಚಿ.ನಾ.ಹಳ್ಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನುಗಳಿಸಿ ಗೆಲುವು ಕಂಡಿದ್ದರು. ಈ ಬಾರಿ ಸ್ಪರ್ಧಿಸಿದರೆ ಕಳೆದ ಬಾರಿಗಿಂತ ಹೆಚ್ಚಿನ ಮತ ದೊರಕಿ ಗೆಲುವು ಕಾಣಲಿದ್ದಾರೆ ಹಾಗೂ ಸಂಸದರ ಅನುದಾನದ ಅಡಿಯಲ್ಲಿ ಸಾಕಷ್ಟು ಯೋಜನೆಗಳನ್ನು ನೀಡಿ ಉತ್ತಮ ಸಂಸದರೆನಿಸಿದ್ದಾರೆ. ಹಾಗಾಗಿ ಎಸ್.ಪಿ.ಎಂ.ರವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು.

         ಯೂತ್ ಕಾಂಗ್ರೆಸ್‍ನ ಹರೀಶ್ ಮಾತನಾಡಿ, ಎಸ್.ಪಿ.ಮುದ್ದಹನುಮೇಗೌಡರು ತಮ್ಮ ಅನುದಾನದಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಜಿಲ್ಲೆಗೆ ನೀಡಿ ಒಳ್ಳೆಯ ಸೇವೆ ನೀಡಿದ್ದಾರೆ. ಅವರ ಸೇವೆ ಶ್ಲಾಘನೀಯವಾಗಿದ್ದು ಕಾಂಗ್ರೆಸ್ ಪಕ್ಷದಿಂದ ಎಸ್.ಪಿ.ಎಂ.ರವರೆ ಸ್ಪರ್ಧಿಸಲಿ ಎಂದು ಕಾರ್ಯಕರ್ತರು ಬಯಸುತ್ತಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಪುರಸಭಾ ಸದಸ್ಯೆ ಉಮಾಪರಮೇಶ್, ಯುವ ಉಪಾಧ್ಯಕ್ಷ ಚೇತನ್, ಮಾಜಿ ಪುರಸಭಾ ಸದಸ್ಯ ಶಿವಕುಮಾರ್, ಹರೀಶ್, ಮುಜೀಬ್, ಸಾಮಾಜಿಕ ಜಾಲತಾಣದ ಸಹಾಯಕ ಪವನ್, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link