ಬೆಂಗಳೂರು:
ತಮ್ಮ ಪಕ್ಷದ 6 ಮಂದಿ ಶಾಸಕರು ಬಿಜೆಪಿಗೆ ಹೋಗದಂತೆ ನೋಡಿಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಸರ್ಕಸ್ ನಡೆಸುತ್ತಿದ್ದು,ಇದಕ್ಕಾಗಿ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಮೂಲಕ ಗುಪ್ತ ಕಾರ್ಯಾಚರಣೆ ಆರಂಭಿಸಿದೆ.
ಸದ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ನ ಯಾವ ನಾಯಕರ ಸಂಪರ್ಕಕ್ಕೂ ಸಿಕ್ಕಿಲ್ಲ.ಅಲ್ಲದೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹೊರ ಬಿದ್ದಿದ್ದು,ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆ ಏನು ಎಂಬುದು ಇದುವರೆಗೂ ತಿಳಿದು ಬಂದಿದೆ.
ಹೀಗಾಗಿ ಬಿಜೆಪಿ ಸೇರುವ ರಮೇಶ್ ಜಾರಕಿಹೊಳಿ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಸಚಿವ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ.
ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರ ಸಂಪರ್ಕಕ್ಕೆ ಸಿಗದೇ ಓಡಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮ ಆಪ್ತ ವಲಯದ ಕೆಲ ಶಾಸಕರ ಜೊತೆಗೆ ಸಂಪರ್ಕದಲ್ಲಿದ್ದು, ಅವರೊಂದಿಗೆ ಕಾಂಗ್ರೆಸ್‍ಗೆ ರಾಜೀನಾಮೆ ನೀಡುವ ತಂತ್ರ ಹೆಣೆದಿದ್ದಾರೆ. ಹೀಗಾಗಿ ರಮೇಶ್, ಪಕ್ಷದ ನಾಯಕರ ಕೈಗೆ ಸಿಗದೇ ಓಡಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸಹೋದರನ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಮುಂದಾಗಿರುವ ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಸಂಪರ್ಕದಲ್ಲಿರುವ ಎಲ್ಲ ಶಾಸಕರನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಸಹೋದರನಿಗೆ ತಿರುಗೇಟು ನೀಡಲು ಸಂಚು ರೂಪಿಸಿರುವ ಸತೀಶ್, ಆಪರೇಷನ್ ಕಮಲದ ತೆಕ್ಕೆಗೆ ಬೀಳುವ ಶಾಸಕರಿಗೆ ಗಾಳ ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಂಡಿದ್ದ ಶಾಸಕರ ಮನವೋಲಿಕೆಗೆ ಯತ್ನಸುತ್ತಿದ್ದಾರೆ.
ಬೆಳಗಾವಿ, ರಾಯಚೂರು ಜಿಲ್ಲೆಯ ಅತೃಪ್ತ ಶಾಸಕರನ್ನು ಈಗಾಗಲೇ ಸಂಪರ್ಕಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಡಿ.27 ರಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ಹೋಗದಂತೆ ಮನಮೋಲಿಸಿದ್ದಾರೆ ಎಂದು ಕಾಂಗ್ರೆಸ ಮೂಲಗಳು ತಿಳಿಸಿವೆ.
ರಾಯಚೂರಿಲ್ಲಿ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅತೃಪ್ತ ಶಾಸಕರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಮನವೋಲಿಸಲು ಯತ್ನಿಸಲಿದ್ದಾರೆ. ಶಾಸಕರಾದ ಬಸವರಾಜ್ ದದ್ದಲ, ಪ್ರತಾಪಗೌಡ ಪಾಟೀಲ, ಡಿ.ಎಸ್. ಹುಲಗೇರಿಯನ್ನ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ