ಸರ್ಕಾರಿ ಸೌಲಭ್ಯಗಳ ಸಮರ್ಪಕ ಬಳಕೆಗೆ ಕರೆ

ಗುಬ್ಬಿ

          ಶೈಕ್ಷಣಿಕ ಗುಣಮಟ್ಟ ಉತ್ತಮಪಡಿಸುವ ಸದುದ್ದೇಶದಿಂದ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದುವಂತೆ ಶಿಕ್ಷಣಾಧಿಕಾರಿ ಎ.ಟಿ.ರಂಗದಾಸಪ್ಪ ಕರೆನೀಡಿದರು.

         ತಾಲ್ಲೂಕಿನ ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿನ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಉಚಿತ ಸಮವಸ್ತ್ರ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಸರಕಾರ ನೀಡುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಸುಸಂಸ್ಕøತ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆ ತಿಳಿಸಿದರು.

         ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹತ್ತು ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಇಂದಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯುವುದರ ಮೂಲಕ ಆದರ್ಶ ವಿದ್ಯಾರ್ಥಿಗಳಾಗಿ ರೂಪುಗೊಳ್ಳುವಂತೆ ತಿಳಿಸಿದ ಅವರು, ಡಾ:ಅಬ್ದುಲ್ ಕಲಾಂರಂತಹ ಹಿರಿಯರ ಆದರ್ಶಗಳನ್ನು ಗುರಿಯಾಗಿಸಿಕೊಂಡು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿಪಥದತ್ತ ಸಾಗುವಂತೆ ತಿಳಿಸಿದರು.

         ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದುವಂತೆ ತಿಳಿಸಿದ ಅವರು, ಇಂದಿನ ವಿದ್ಯಾರ್ಥಿಗಳು ಸ್ವಾಮಿವಿವೇಕಾನಂದರಂತಹ ಹಿರಿಯರ ಆದರ್ಶಗಳನ್ನು ಪಾಲಿಸುವುದರ ಜೊತೆಗೆ ನಿರ್ದಿಷ್ಟವಾದ ಗುರಿ ಇಟ್ಟುಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದುವಂತೆ ಕರೆನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಸಿದ್ದಲಿಂಗಸ್ವಾಮಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಆದರ್ಶ ವಿದ್ಯಾರ್ಥಿಗಳಾಗಿ ರೂಪುಗೊಳ್ಳುವಂತೆ ತಿಳಿಸಿದರು.

         ಇದೆ ಸಂದರ್ಭದಲ್ಲಿ ನಿಲಯದ ವಿದ್ಯಾರ್ಥಿನಿಯರಿಗೆ ಉಚಿತ ಸಮವಸ್ತ್ರ, ಲೇಖನ ಸಾಮಗ್ರಿ ಸೇರಿದಂತೆ ಇತರೆ ಪರಿಕರಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ವಿಷಯ ಪರಿವೀಕ್ಷಕರಾದ ಗಿರೀಶ್, ನಿಲಯ ಪಾಲಕಿ ಹೇಮಾ ಸೇರಿದಂತೆ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link