ಬೆಂಗಳೂರು
ಜೆಡಿಎಸ್ ರಾಜ್ಯಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಹೆಚ್. ವಿಶ್ವನಾಥ್ ನಿರ್ಧರಿಸಿದ್ದಾರೆ. ರಾಜ್ಯ ಪ್ರವಾಸ ಕೈಗೊಳ್ಳಲು ,ಪಕ್ಷ ಸಂಘಟನೆಯಲ್ಲಿ ತೊಗಗಿಸಿಕೊಳ್ಳಲು ಆರೋಗ್ಯ ಸಹಕರಿಸುತ್ತಿಲ್ಲವೆಂಬ ಕಾರಣ ನೀಡಿ ಜನವರಿ ಮೊದಲ ವಾರ ರಾಜೀನಾಮೆ ನೀಡುವುದಾಗಿ ಸುದ್ದಿಗಾರರಿಗೆ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ಅಧ್ಯಕ್ಷ ಸ್ಥಾನ ನೀಡಿದರು ಜವಾಬ್ದಾರಿ ನೀಡಿಲ್ಲ,ಎಲ್ಲವನ್ನು ವರಿಷ್ಟರೇ ನಿರ್ಧರಿಸುತ್ತಾರೆ, ರಾಜ್ಯಾಧ್ಯಕ್ಷ ಸ್ಥಾನದಿಂದಾಗಿ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಗಡಿಸಿಕೊಳ್ಳಲು ಕಷ್ಟವಾಗುತ್ತಿದೆ.ಈ ನಡುವೆ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ.ಲೋಕಸಭಾ ಚುನಾವಣೆ ಹತ್ತಿರವಿರುವ ಕಾರಣ ಪೂರ್ಣ ಪ್ರಮಾಣದಲ್ಲಿ ಪಕ್ಷದ ಸಂಘಟನೆ,ಚುನಾವಣೆ,ಪ್ರಚಾರ ,ಅಭ್ಯರ್ಥಿ ಆಯ್ಕೆ ಹತ್ತಾರು ಕೆಲಸ ಕಾರ್ಯಗಳಲ್ಲಿ ಭಾಗವಹಿಸಲು ಕಷ್ಟವಾಗುತ್ತದೆ,ಹೀಗಾಗಿ ಅನಿವಾರ್ಯವಾಗಿ ಪಕ್ಷದ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ ಎಂದು ತಮ್ಮ ನೋವನ್ನು ತೋಡಿಕೊಂಡರು.
ಈ ಬಗ್ಗೆ ಪಕ್ಷದ ರಾಷ್ಟ್ರೀಯ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರ ಬಳಿ ಮಾತುಕತೆ ನಡೆಸಿ ಅಂತಿಮವಾಗಿ ರಾಜೀನಾಮೆ ನೀಡುವುದಾಗಿ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.