ಬೆಂಗಳೂರು:

2018ರ ಹೊಸ ವರ್ಷಾಚರಣೆ ವೇಳೆ ನಡೆದಿದ್ದ ಒಂದು ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕುಡಿದ ಮತ್ತಿನಲ್ಲಿ ಯುವಕರು ತಮ್ಮ ಲಂಪಟ ತನ ತೋರುವ ಮೂಲಕ ಅಲ್ಲಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ತೊಂದರೆ ನೀಡಿದ್ದರು ಆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಂದು ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದು ಹೋಗಿದೆ.
ಅದೇ ಜಾಗ ಅದೇ ರೀತಿಯ ಮತ್ತೊಂದು ಘಟನೆ ಎಂಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆ ದಂಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ .
ಜಯನಗರದ ನಿವಾಸಿಗಳಾದ ಬಿಹಾರ ಮೂಲದ ದಂಪತಿಗಳ ಮೇಲೆ ದುಷ್ಕರ್ಮಿಗಳ ದಾಳಿ ಮಾಡಿದ್ದು, ದಂಪತಿಗಳಿಂದ ಮೊಬೈಲ್ ಮತ್ತು ಪರ್ಸ್ ಕಿತ್ತುಕೊಂಡಿದ್ದಲ್ಲದೆ ಪತಿಗೆ ಥಳಿಸಿ ಆತನ ಪತ್ನಿಯ ಜೊತೆಯಲ್ಲಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
