ಬೆಂಗಳೂರು
ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಿಯಂತ್ರಿಸಲು ಪೊಲೀಸರು ನಡೆಸಿದ ಫೈರಿಂಗ್ ನಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರಿಗೆ ಗುಂಡೇಟು ತಗುಲಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಿಸಲಾಗಿದೆ. ಗಲಭೆ ಹಿನ್ನಲೆಯಲ್ಲಿ ಡಿ.ಜೆ.ಹಳ್ಳಿ,ಕೆ.ಜೆ.ಹಳ್ಳಿ,ಶಿವಾಜಿ ನಗರ ವ್ಯಾಪ್ತಿಯಲ್ಲ ಕರ್ಪ್ಯೂ ಜಾರಿಯಲ್ಲಿದ್ದು ಬೆಂಗಳೂರು ನಗರಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಗಲಭೆ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಪೊಲೀಸರು ಮೇಲೆ ಧಾಳಿ ಹಾಗೂ ಠಾಣೆಗೆ ಬೆಂಕಿ ಹಚ್ಚುವ ಪ್ರಯ ತ್ನ ತಡೆಯಲು ಪೊಲೀಸರು ಗಾಳಿಯಲ್ಲಿ 5 ಸುತ್ತುಗಳು ಗುಂಡು ಹಾರಿಸಿದ್ದಾರೆ.ಅದಕ್ಕೂ ಜಗ್ಗದ ಗಲಭೆಕೋರರ ನಿಯಂತ್ರಿಸಲು ಪೊಲೀಸರು ಅನಿವಾರ್ಯವಾಗಿ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ನಲ್ಲಿ 3 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಯಿತು. ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದ್ದು ಆಯಕಟ್ಟಿನ ಸ್ಥಳಗಳಲ್ಲಿ ವ್ಯಾಪಕ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಹೈದರಾಬಾದ್ ಮತ್ತು ಚೈನ್ನೈನಿಂದ ತಲಾ ಮೂರು ಕ್ಷಿಪ್ರ ಕಾರ್ಯಪಡೆ, ಕೆಎಸ್ ಆರ್ ಪಿ ಪಡೆಗಳು ಆಗಮಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗುವುದು ಎಂದರು.
ರಾಜ್ಯದ ಗೃಹ ಕಾರ್ಯದರ್ಶಿಯವರು ಘಟನೆ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅವರಿಗೆ ಮಾಹಿತಿ ನೀಡಿದ್ದು, ಕೇಂದ್ರದ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಘಟನೆ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಅಂತೆಯೇ ಗಲಭೆಯಲ್ಲಿ ಕಲ್ಲು ತೂರಾಟ, ಬಾಟೆಲ್ ಗಳಿಂದ ಗಲಭೆಕೋರರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಿಣಾಮ ಕಮಿಷನರ್ ಕಮಲ್ ಪಂಥ್,ಡಿಸಿಪಿ,ಎಸಿಪಿಗಳು ಸೇರಿದಂತೆ 50 ಹೆಚ್ಚು ಪೊಲೀಸರಿಗೆ, ಗಾಯಗಳಾಗಿವೆ. 15ಕ್ಕೂ ಹೆಚ್ಚು ಪೊಲೀಸರಿಗೆ ರಕ್ತಗಾಯಗಳಾಗಿದ್ದು ಅವರಿಗೆ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದ್ದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಗಲಭೆ ನಿಯಂತ್ರಣ ಹಾಗೂ ಪರಿಸ್ಥಿತಿ ನಿಯಂತ್ರಿಸಲು ಡಿ.ಜೆ.ಹಳ್ಳಿ,ಕೆ.ಜೆ.ಹಳ್ಳಿ ,ಶಿವಾಜಿ ನಗರ ಪ್ರದೇಶದಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ.ಇಡೀ ಪ್ರದೇಶವನ್ನು ನಾಕಾ ಬಂಧಿ ಬಿಗಿಗೊಳಸಿಲಾಗಿದ್ದು ಒಳಗೆ ಬರುವುದು ಹೊರಗೆ ತೆರಳುವುದನ್ನು ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.
ಘಟನೆ ಸಂಬಂಧ ತನಿಖೆಗಾಗಿ ಸಿಸಿಬಿ ಮುಖ್ಯಸ್ಥ ಹಾಗೂ ಹೆಚ್ಚುವರಿ ಪೊಲೀಸ್ ಆಯಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದ್ದು ಡಿಸಿಪಿ ಶರಣಪ್ಪ,ರಮೇಶ್ ಬಾನೋತ್,ಭೀಮಾಶಂಕರ್ ಗುಳೇದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.ಈಗಾಗಲೇ ಘಟನೆ ಸಂಬಂಧ 110ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ಗಲಭೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗ ಳನ್ನು ಬಂಧಿಸುವ ಸಾಧ್ಯತೆ ಇದೆ.ಅಲ್ಲದೆ ಗಲಭೆ ಸಂಬಂಧ ಡಿ.ಜೆ.ಹಳ್ಳಿ ಪೆÇಲೀಸ್ ಠಾಣೆಯಲ್ಲಿ 10ಕ್ಕೂ ಹೆಚ್ಚು ಎಫ್ ಐಆರ್ ಗಳನ್ನು ದಾಖಲಿಸಲು ತೀರ್ಮಾನಿಸಲಾಗಿದೆ.
ಇನ್ನೂ ಘಟನೆಯಲ್ಲಿ ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಬಳಿಕ ಡಿಸಿಪಿ ಶರಣಪ್ಪ ಅವರ ಇನ್ನೋವಾ ಕಾರು,ಸೇರಿದಂತೆ ಬೊಲೆರೋ ಜೀಪ್ ಗಳು,ಟಾಟಾ ಸುಮೋ ಜೀಪ್ ಗಳು,ಕೆಎಸ್‍ಆರ್ಪಿ ಬಸ್ ಸೇರಿದಂತೆ ಪೊಲೀಸರ ದ್ವಿಚಕ್ರ ವಾಹ ನಗಳು,ಸಾರ್ವಜನಿಕರ ವಾಹನಗಳು ಸೇರಿದಂತೆ 50ಕ್ಕೂ ಹೆಚ್ಚು ವಾಹನಗಳಿಗ ಬೆಂಕಿ ಹಚ್ಚಲಾಗಿದ್ದು ಅವರನ್ನು ತಪಾಸಣೆ ನಡೆಸಲಾಗುತ್ತಿದೆ.
ಸ್ಥಳದಲ್ಲಿರುವ ಸಿಸಿಟಿವಿ,ಹಾಗೂ ಮೊಬೈಲ್ ಪೂಟೇಜ್ ಗಳು, ಮಾಧ್ಯಮಗಳ ದೃಶ್ಯಾವಳಿಗಳನ್ನು ಪರಿಶೀಲನ ನಡೆಸಿರುವ ಪೊಲೀಸರು ಎಲ್ಲಾ ದಾಖಲೆಗಳು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.ಅಂತೆಯೇ ಡಿ.ಜೆ.ಹಳ್ಳಿ ಪೊಲೀಸ್ ಠಾಣೆ,ಕೆ.ಜೆ.ಹಳ್ಳಿ ಪೊಲೀಸ್ ಠಾಣೆ,ಪೊಲೀಸ್ ಕ್ವಾಟ್ರಸ್ ಹಾಗೂ ಬಾರ್, ಸಾರ್ವ ಜನಿಕರ ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸದ್ಯಕ್ಕೆ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ, ಶಿವಾಜಿ ನಗರದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ. ಪೊಲೀಸರು ಎಲ್ಲೆಡೆ ಸರ್ಪಗಾವಲು ಹಾಕಿದ್ದಾರೆ.
ಬೆಳಗಿನ ಜಾವ ಘಟನಾ ಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗ ಳೊಂದಿಗೆ ಚೆರ್ಚೆ ನಡೆಸಿದರು. ಬೆಳಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಡಿಸಿಎಂ ಅಶ್ವತ್ಥ್ ನಾರಾಯಣ್ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.








