ಮೊಳಕಾಲ್ಮುರು
ನನಗೆ ಅಭಿವೃದ್ದಿಯ ಬಗ್ಗೆ ಬದ್ದತೆ ಇದೆ.ಕಾಳಜಿಯೂ ಇದೆ. ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದರೆ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ
ಮೊಳಕಾಲ್ಮೂರಿನಲ್ಲಿ ಶುಕ್ರವಾರ ಚುನಾವಣಾ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, ನಾನು ಸುಳ್ಳು ಹೇಳಿ ರಾಜಕಾರಣ ಮಾಡುವುದಿಲ್ಲ. ಸಾದ್ಯವಾದಷ್ಟು ಉತ್ತಮ ಕೆಲಸ ಮಾಡಲು, ಎಲ್ಲಾ ವರ್ಗದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದಾಗಿ ಹೇಳಿದರು
ದೇಶ ಕಂಡ ಅಪ್ರತಿಮ ನಾಯಕ, ದೇಶಾಭಿಮಾನಿ, ದೇಶವನ್ನು ಅಭಿವೃದ್ದಿಯತ್ತ ತೆಗೆದುಕೊಂಡು ಹೋಗುವ ಚೌಕಿದಾರ ನರೇಂದ್ರ ಮೋದಿಜಿಯನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಬಿಜೆಪಿ ಪಕ್ಷದ ಕಟ್ಟ ಅಭಿಮಾನಿಗಳು ಕಂಕಣಕಟ್ಟಿ ಪ್ರತಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿದೆ ಎಂದು ಹೇಳಿದರ
ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಬರದ ಜಿಲ್ಲೆ ಇದಾಗಿದ್ದು, ಕುಡಿಯುವ ನೀರು ಒಳಗೊಂಡಂತೆ ಹಲವು ಬಗೆಯ ಸಮಸ್ಯೆಗಳಿಂದ ಜನರು ನರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ತಮ್ಮನ್ನು ಕ್ಷೇತ್ರದ ಮತದಾರರು ಬೆಂಬಲಿಸಿದರೆ ಖಂಡಿತವಾಗಿಯೂ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿಯೂ ಹೇಳಿದರು
ಶಾಸಕ ಬಿ.ಶ್ರೀರಾಮು ಮಾತನಾಡಿ, ಇಡೀ ಜಗತ್ತು ಇಂದು ಭಾರತದ ಕಡೆಗೆ ನೋಡುವಂತಾಗಿದೆ. ಆರ್ಥಿಕ, ಸಾಮಾಜಿಕ ಹಾಗೂ ಇನ್ನಿತರೆ ವಲಯಗಳಲ್ಲಿ ಮೋದಿ ಅವರು ಪ್ರಧಾನಿಯಾದ ಬಳಿಕ ಇಡೀ ಸಾಕಷ್ಟು ಅಭಿವೃದ್ದಿ ಕಂಡಿದೆ. ಇಂತಹ ಮಹಾನಾಯಕನನ್ನು ದೇಶದ ಪ್ರಧಾನಿಯನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು
ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಎಸ್.ನವೀನ್ ಮಾತನಾಡಿ, ಕ್ಷೇತ್ರದಲ್ಲಿ ಎಲ್ಲಾ ಕಡೆಯೂ ಬಿಜೆಪಿ ಬಗ್ಗೆ ಜನರಲ್ಲಿ ಒಲವು ಮೂಡಿದೆ. ಜೊತೆಗೆ ಪ್ರಧಾನಿ ನರೇಂದ್ರಮೋದಿ ಅವರ ಅಲೆಯೂ ಇದೆ. ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/7.gif)