ಎಂ ಎನ್ ಕೋಟೆ :
ನರೇಗಾ ಯೋಜನೆಯಲ್ಲಿ ರೈತರು ತಮ್ಮ ಜಮೀನಿನಲ್ಲಿ ಸಾಕಷ್ವು ಕೆಲಸಗಳನ್ನು ಮಾಡಿ ಆರ್ಥಿಕವಾಗಿ ಮುಂದೆ ಬರಬಹುದು ಎಂದು ಗ್ರಾಮ ಪಂಚಾಯಿತಿ ಪಿಡಿಓ ಗಂಗಣ್ಣ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಹೊಸಕೆರೆ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ನರೇಗಾ ಯೋಜನೆಯಲ್ಲಿ ಸಾಕಷ್ವು ಸೌವಲತ್ತುಗಳನ್ನು ರೈತರು ಬಳಸಿಕೊಳ್ಳಬೇಕು. ಸರ್ಕಾರದ ಅನುದಾನವನ್ನು ರೈತರು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜೂತೆಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ರೈತರು ಜಮೀನಿನಲ್ಲಿ ಬದು ನಿರ್ಮಾಣ,ಕೃಷಿಹೊಂಡ, ಗಿಡ ನೆಡುವುದು, ಆಟದ ಮೈದಾನ, ಚೆಕ್ ಡ್ಯಾಂ ಇನ್ನು ಹಲವಾರು ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕ್ ಪಶು ವೈದ್ಯಧಿಕಾರಿ ದೇವರಾಜು,ಗ್ರಾಮ.ಪಂಚಾಯಿತಿ ಅಧ್ಯಕ್ಷ ಗುಬ್ಬಣ್ಣ ಕಾರ್ಯದರ್ಶಿ ಪ್ರಕಾಶ್ ಪೂಜಾರಿ , ಗ್ರಾಮ ಪಂಚಾಯಿತಿ ಸದಸ್ಯರಾದ ಸುನಂದಮ್ಮ ಕೃಷ್ಣಪ್ಪ, ಶಿವಕುಮಾರ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
