ಮೈಸೂರು:
ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದ ಶ್ರೀಮತಿ ಇಂದಿರಾ ಗಾಂಧಿ ಅವರ ಅವಧಿಯಲ್ಲಿ ನಡೆದ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಮರೆತು ಹೋಗಿರುವಿರಾ. ಅದಕ್ಕಿಂತಲು ದೊಡ್ಡದಾ ಈಗ ನೀವು ಮಾಡಿಸಿರುವ ಸರ್ಜಿಕಲ್ ಸ್ಟ್ರೈಕ್ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
“ಬಿಜೆಪಿ ಅವರು ರಾಜಕೀಯ ಲಾಭಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಅನ್ನು ಬಳಸಿಕೊಳ್ಳುತ್ತಿದ್ದಾರೆ. ಯಾರೂ ಕೂಡ ರಾಷ್ಟ್ರೀಯ ಭದ್ರತೆ ವಿಷಯ ಬಳಸಿಕೊಂಡು ಯಾರೂ ರಾಜಕೀಯ ಲಾಭ ಪಡೆದುಕೊಳ್ಳಬಾರದು. ಹಾಗೇ ಲೆಕ್ಕ ಹಾಕಿದರೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 11-12 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು” ಎಂದು ತಿಳಿಸಿದ್ದಾರೆ.
ಬಿಜೆಪಿ ಯಾವತೇ ಆಗಲಿ ಅಭಿವೃದ್ಧಿ ವಿಚಾರದಲ್ಲಿ ರೈತರ ವಿಚಾರಲ್ಲಿ ಮತ ಕೇಳಿದ್ದಾರಾ?. ಭಾವನಾತ್ಮಕ ವಿಚಾರ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಾರೆ. ಅವರಿಗೆ ಸಿಕ್ಕ ಈ ಐದು ವರ್ಷಗಳಲ್ಲಿ ಯಾವ ಅಭಿವೃದ್ಧಿಯನ್ನು ಮಾಡಿಲ್ಲ. ಹೀಗಾಗಿ ಈ ವಿಚಾರ ಇಟ್ಟುಕೊಂಡು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
