ತುಮಕೂರು
ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡಿದರೆ ಖಂಡಿತಾ ಸೋಲಿಸುತ್ತೇವೆ, ರಾಜ್ಯದಲ್ಲಿ ಮೋದ ಆಟ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮೋದಿ ಬೆಂಗಳೂರಿನ ಕ್ಷೇತ್ರವೊಂದರಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮೋದಿ ಗೆಲ್ಲಲು ಅವಕಾಶವಿಲ್ಲ ಎಂದರು.ರಾಜ್ಯದ ಹಿರಿಯ, ಅನುಭವಿ ರಾಜಕಾರಣಿ ದೇವೇಗೌಡರು ಹೆಚ್ಚು ಬಾರಿ ಸಂಸದರಾಗಿ ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಯನ್ನು ಸಮರ್ಥವಾಗಿ ಸಕಾರದ ಗಮನಕ್ಕೆ ತರುವಲ್ಲಿ ಪ್ರಯತ್ನಪಟ್ಟವರು. ಮುಖ್ಯಮಂತ್ರಿಯಾಗಿದ್ದವರು. ಪ್ರಧಾನಿಯಾಗಿ ಕನ್ನಡಿಗರೊಬ್ಬರು ಪ್ರಥಮ ಬಾರಿಗೆ ಪ್ರಧಾನಿಯಾಗ ಹೆಗ್ಗಳಿಕೆ ತಂದುಕೊಟ್ಟವರು. ದೇವೇಗೌಡರು ಈಗ ಮೈತ್ರ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರಕ್ಕೆ ಅವರನ್ನು ಸ್ವಾಗತಿಸುತ್ತೇನೇ, ಎರಡು ಪಕ್ಷಗಳ ಸಹಕಾರದಿಂದ ಇವರನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.
ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮೈತ್ರಿ ಸರ್ಕಾರ ರಚಿಸಲಾಯಿತು. ಆ ವೇಳೆ ಬಿಜೆಪಿ ವಿರೋಧಿಸುವ ದೇಶದ ವಿವಿಧ 21 ಪಕ್ಷಗಳ ನಾಯಕರ ಸಮ್ಮುಖದಲ್ಲಿ ವಿಧಾನ ಸೌಧದ ಎದುರು ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ತಾವು ಪ್ರಮಾಣ ವಚನ ಸ್ವೀಕರಿಸಿದ್ದನ್ನು ಸ್ಮರಿಸಿದ ಡಾ. ಪರಮೇಶ್ವರ್, ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಆ ಸಂದರ್ಭದಲ್ಲೇ ತೀಮಾನಿಸಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸೀಟು ಹಂಚಿಕೆ ಮೇಲೆ ಚುನಾವಣೆ ಎದುರಿಸಲು ನಿರ್ಧರಿಸಲಾಗಿತ್ತು ಎದರಂತೆ ಜೆಡಿಎಸ್ ಗೆ ಎಂಟು ಸ್ಥಾನ ಬಿಟ್ಟುಕೊಟ್ಟು ಎರಡು ಪಕ್ಷಗಳು ಒಟ್ಟಾಗಿ ಈ ಚುನಾವಣೆಗೆ ಹೋಗುತ್ತಿದ್ದೇವೆ ಎಂದು ಡಾ. ಪರಮೇಶ್ವರ್ ಹೇಳಿದರು.
ಪಕ್ಷದ ವರಿಷ್ಠರ ತೀರ್ಮಾನವೇ ಆಗಿರುವ ಕಾರಣ ಎರಡು ಪಕ್ಷದವರು ಮೈತ್ರಿ ಧರ್ಮ ಪಾಲಿಸಬೇಕು. ಹೀಗಾಗಿ ಹಾಲಿ ಸಂಸದ ಮುದ್ದಹನುಮೇಗೌಡರು ಹಾಗೂ ಮಾಜಿ ಶಾಸಕ ಕೆ ಎನ್ ರಾಜಣ್ಣ ದೇವೇಗೌಡರೆದುರು ಸ್ಪರ್ಧಿಸುವುದು ಸರಿಯಲ್ಲ, ಅವರು ನಾಮಪತ್ರ ವಾಪಸ್ ಪಡೆಯಲು ಮನವೊಲಿಸುವುದಾಗಿ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
