ದಾವಣಗೆರೆ:
ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‍ಗಳು ಸಾಲ ವಸೂಲಾತಿಗಾಗಿ ರೈತರಿಗೆ ನೋಟಿಸ್ ನೀಡುತ್ತಿರುವ ಕ್ರಮ ಖಂಡಿಸಿ ಹಾಗೂ ವಿವಿಧ ನಿಗಮ, ಮಂಡಳಿಗಳ ಫಲಾನುಭವಿಗಳಿಗೆ ಬ್ಯಾಂಕ್‍ಗಳು ಸಾಲ ಪಡೆಯಲು ಕ್ಲೈಮು ಪತ್ರ ನೀಡದಿರುವುದನ್ನು ವಿರೋಧಿಸಿ ಬುಧವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ಯ ಕಾರ್ಯಕತರ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟ ರೈತರು, ಪ್ರಮುಖ ಬೀದಿಗಳಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾ, ತಾಲೂಕು ಕಚೇರಿಗೆ ತೆರಳಿ ಅಲ್ಲಿ ಬ್ಯಾಂಕಿನ ಕೋರ್ಟ್ ನೋಟೀಸ್‍ನ ನಕಲು ಪ್ರತಿಗೆ ಬೆಂಕಿ ಹಚ್ಚಿ ಕಿಡಿ ಕಾರಿ, ತಹಸೀಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ರಾಜ್ಯ ಸರ್ಕಾರವು ರೈತರ ಸಾಲ ಮನ್ನಾ ಯೋಜನೆ ಜಾರಿಗೊಳಿಸಿದೆ. ರೈತರ ಸಾಲದ ಕಂತನ್ನು ಸರ್ಕಾರವೇ ಭರಿಸುತ್ತದೆ ಎಂಬುದಾಗಿ ನಿರ್ದೇಶನವನ್ನೂ ನೀಡಿದೆ. ಅಲ್ಲದೇ, ಕೆಲವರಿಗೆ 50 ಸಾವಿರ ರೂ. ಜಮಾ ಆಗಿದೆ. ಆದರೆ, ಈಗ ನೀತಿ ಸಂಹಿತೆ ಜಾರಿ ಇರುವುದರಿಂದ ಈ ಕಾರ್ಯ ಸ್ಥಗಿತಗೊಂಡಿದೆ. ಇದನ್ನೇ ನೆಪ ಮಾಡಿಕೊಂಡು ಕೆಲವು ಬ್ಯಾಂಕ್‍ಗಳ ಅಧಿಕಾರಿಗಳು ಸಾಲ ವಸೂಲಾತಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿ ದೌರ್ಜನ್ಯ ಎಸಗಿದೆ ಎಂದು ಆರೋಪಿಸಿದರು.
ಕ್ಷಣವೇ ಅಧಿಕಾರಿಗಳು ಮಧ್ಯ ಪ್ರವೇಶಿಸಿ, ಸರ್ಕಾರವೇ ಸಾಲದ ಕಂತನ್ನು ಭರಿಸಲಿದ್ದು, ಯಾವುದೇ ಕಾರಣಕ್ಕೆ ರೈತರಿಗೆ ನೋಟೀಸ್ ಜಾರಿ ಮಾಡದಂತೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.
ಎಸ್‍ಸಿ, ಎಸ್ಟಿ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ನೀಡುವ ಸಾಲಸೌಲಭ್ಯದ ಫಲಾನುಭವಿಗಳ ಪಟ್ಟಿಯನ್ನು ಈಗಾಗಲೇ ನಿಗಮಗಳು ಆಯಾ ಬ್ಯಾಂಕ್‍ಗಳಿಗೆ ಕಳುಹಿಸಿಕೊಟ್ಟಿವೆ. ಆದರೆಮ ಬ್ಯಾಂಕ್ ಅಧಿಕಾರಿಗಳು ಕ್ಲೈಮ್ ನೀಡಲು ಸತಾಯಿಸುತ್ತಿದ್ದಾರೆ. ಅಧಿಕಾರಿಗಳ ಇಂತಹ ವರ್ತನೆಯಿಂದ ಬಡ ಫಲಾನುಭವಿಗಳಿಗೆ ಯಾವುದೇ ಸೌಲಭ್ಯವೂ ಸಿಗದಂತಾಗಿದೆ ಎಂದು ಆರೋಪಿಸಿದರು.
ಆದ್ದರಿಂದ ತಹಶೀಲ್ದಾರ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೌಲ-ಸೌಲಭ್ಯಕ್ಕೆ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಕ್ಲೈಮ್ ನೀಡುವಂತೆ ಸೂಚನೆ ನೀಡುವುದರ ಜೊತೆಗೆ ಬರೀ ಚುನಾವಣಗಷ್ಟೆ ಗಮನ ಹರಿಸದೇ ಕುಡಿಯುವ ನೀರು, ಚರಂಡಿ ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಅರಸನಾಳು ಸಿದ್ಧಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ್, ಆಲೂರು ಪ್ರಕಾಶ್, ಕೋಲ್ಕುಂಟೆ ಬಸಣ್ಣ, ಕಾಡಜ್ಜಿ ಪ್ರಕಾಶ್, ಚಿರಂಜೀವಿ, ಬೂದಾಳ್ ಭಗತ್‍ಸಿಂಹ, ಗುಮ್ಮನೂರು ಕೃಷ್ಣಮೂರ್ತಿ, ಯಲೋದಹಳ್ಳಿ ರವಿ ಮತ್ತಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








