ದಾವಣಗೆರೆ
ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ದಾವಣಗೆರೆಯ ಎಂ.ಸಿ.ಸಿ ಬಿ.ಬ್ಲಾಕ್‍ನಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಇಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ(ಗ್ರೇಡ್-1)ಬೇಬಿ ಸುನೀತಾ ಇವರ ನೇತೃತ್ವದಲ್ಲಿ ಮತದಾನ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ ಹಾಗೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿ ವಿದ್ಯಾರ್ಥಿಗಳಿಂದ ಅವರ ಪೋಷಕರಿಗೆ ಹಾಗೂ ಸಂಬಂಧಿಕರಿಗೆ ಪತ್ರ ಬರೆಯಿಸಿ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ನಿಲಯದ ವಾರ್ಡನ್ ಮೀನಾಕ್ಷಿ.ಎಂ.ನಾಯ್ಡು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶಿವಾನಂದ ಕುಂಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








