ಲಾರಿ ಬೈಕ್ ಡಿಕ್ಕಿ : ಬೈಕ್ ಸವಾರ ಸಾವು

ಬೆಂಗಳೂರು

      ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕತ್ತಿಗನೂರು ಬಳಿ ನಡೆದಿದೆ.

       ಮೃತಪಟ್ಟವರನ್ನು ಡಾಬಸ್ ಪೇಟೆಯ ಹೆಗ್ಗುಂದದ ಕಾಂತರಾಜು(32)ಎಂದು ಗುರುತಿಸಲಾಗಿದೆ.ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾಂತರಾಜು ಅವರು ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಮನೆಗೆ ರಾಷ್ಟ್ರೀಯ ಹೆದ್ದಾರಿ 4ರ ಕೆರೆಕತ್ತಿಗನೂರಿನ ಬಳಿ ಹೋಗುತ್ತಿದ್ದರು.

       ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ .ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ