ಹಳೇ ಮೈಸೂರು ಭಾಗದತ್ತ ಹೆಚ್ಚಿನ ಗಮನ ಹರಿಸಿದ ಬಿಜೆಪಿ

ಬೆಂಗಳೂರು:

       ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಿನಿಂದಲ್ಲೇ ಸಿದ್ದತೆ ಮಾಡಿಕೊಳ್ಳುತ್ತಿರುವ ರಾಜ್ಯ ಬಿಜೆಪಿ ಹಳೇ ಮೈಸೂರು ಭಾಗದತ್ತ ಹೆಚ್ಚಿನ ಗಮನ ಹರಿಸಿದೆ.

      ಸದ್ಯ ಮುಂಬುವರ ಲೋಕಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ.

        ಇನ್ನು ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದ್ದಾರೆ.ಇತ್ತೀಚಿಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪ-ಚುನಾವಣೆಯ ಉಸ್ತುವಾರಿಯನ್ನಾಗಿ ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನ ಆಯ್ಕೆ ಮಾಡಲಾಗಿತ್ತು.ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಮತಗಳೇ ಹೆಚ್ಚಾಗಿದ್ದು,ಆರ್.ಅಶೋಕ್ ಕೂಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

        ಇದರ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಅಭ್ಯರ್ಥಿಗಳನ್ನು ಹುಡುಕಲು ಆರ್.ಅಶೋಕ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.ಯಡಿಯೂರಪ್ಪ ಬಿಜೆಪಿಯ ಒಕ್ಕಲಿಗ ಸಮುದಾಯದ ನಾಯಕನ ಸಹಾಯದಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಹುಡುಕಿ ಎಂದು ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

         ಅಲ್ಲದೇ ಜನವರಿ 10 ರೊಳಗೆ ಅಭ್ಯರ್ಥಿಗಳ ಪಟ್ಟಿ ನೀಡಿ ಎಂಬ ಯಡಿಯೂರಪ್ಪರ ಸೂಚನೆ ಮೇರೆಗೆ ಅಭ್ಯರ್ಥಿಗಳ ಹುಡುಕಾಟದಲ್ಲಿ ಆರ್.ಅಶೋಕ್ ತೊಡಗಿದ್ದಾರೆ.ಅಲ್ಲದೆ,ಅಶೋಕ್ ಮಂಡ್ಯ ಕ್ಷೇತ್ರದಲ್ಲಿ ಲಕ್ಷ್ಮೀ ಅಶ್ವಿನ್ ಗೌಡರ ಪರ ಒಲವು ತೋರಿಸಿದ್ದಾರೆ.ಲಕ್ಷ್ಮೀ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹಾಗಾಗಿ ಅಶೋಕ್ ಮಂಡ್ಯದಲ್ಲಿ ಲಕ್ಷ್ಮೀ ಅವರಿಗೆ ಮೊದಲ ಪ್ರಾಶಸ್ತ್ಯ ನೀಡಿದ್ದಾರೆ .ಉಳಿದಂತೆ ಅಶೋಕ್ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನದಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap