ಬೆಂಗಳೂರು:

ಅಂಬರೀಷ್ ಮಾನಸ ಪುತ್ರರೆಂದೇ ಹೇಳುವ ನಟರಾದ ದರ್ಶನ್ ಮತ್ತು ಯಶ್ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಪರ ಪ್ರಚಾರ ಮಾಡುವುದಾಗಿ ಈ ಇಬ್ಬರು ನಟರು ಘೋಷಿಸಿದ ಬೆನ್ನಲೇ ಈ ಪ್ರಕರಣ ದಾಖಲಾಗಿದೆ ಮತ್ತು ಇದು ನೀತಿ ಸಂಹಿತೆ ಅಡಿಯಲ್ಲಿ ಬರುವುದರಿಂದ ಜನರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಚುನಾವಣಾ ಅಧಿಕಾರಿಗಳಿಗೆ ರಕ್ಷಣಾ ವೇದಿಕೆಯ ಮುಖಂಡರು ದೂರು ಸಲ್ಲಿಸಿದ್ದಾರೆ.
ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯುವವರೆಗೆ ನಟರಾದ ದರ್ಶನ್ ಮತ್ತು ಯಶ್ ಅವರ ಚಲನಚಿತ್ರಗಳು, ಟಿ ವಿ ಕಾರ್ಯಕ್ರಮಗಳು, ಜಾಹೀರಾತುಗಳು ಮತ್ತು ಸಿನಿಮಾಗಳನ್ನು ಪ್ರಸಾರ ಮಾಡಬಾರದು ಎಂದು ದೂರಿನಲ್ಲಿ ಕೋರಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
