ಹೊಸಪೇಟೆ :
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದ ನೆಹರೂ ಕಾಲನಿಯಲ್ಲಿನ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಹಾಗು ದೀಪೋತ್ಸವ ಕಾರ್ಯಕ್ರಮ ನಡೆಯಿತು.
ಶ್ರೀ ಅಯ್ಯಪ್ಪಸ್ವಾಮಿ ಉತ್ಸವ ಮೂರ್ತಿಗೆ ತುಪ್ಪ, ಜೇನುತುಪ್ಪ, ಕ್ಷೀರ ಸೇರಿ ಗಂಧ ಭಸ್ಮದ ಅಭಿಷೇಕ ನೆರವೇರಿತು. ಅಯ್ಯಪ್ಪಸ್ವಾಮಿ ಮೂರ್ತಿಯನ್ನು ವಿಶೇಷವಾಗಿ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ಶಂಕರ ನಂಬೂದರಿ ಪೂಜಾ ಕಾರ್ಯಗಳನ್ನು ನೆರವೇರಿಸಿದರು.
ದೇವಸ್ಥಾನದ ಆವರಣದಲ್ಲಿ ಸಂಜೆ ದೀಪೋತ್ಸವ ಕಾರ್ಯಕ್ರಮದಲ್ಲಿ ನೂರಾರು ಜನ ಭಕ್ತರು ದೀಪ ಬೆಳಗಿಸಿದರು. ಅಯ್ಯಪ್ಪ ಮಾಲಾಧಾರಿಗಳಿಗೆ ಜಿಲ್ಲಾಧಿಕಾರಿ ಡಾ,ರಾಮ್‍ಪ್ರಸಾತ್ ಮನೋಹರ್ ಅವರು ಉಪಾಹಾರದ ವ್ಯವಸ್ಥೆಯನ್ನು ಮಾಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ