ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ …!!

ಬೆಂಗಳೂರು

        ಸಿಲಿಕಾನ್ ಸಿಟಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಸೇರಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಕಾಡುಗೋಡಿಯಲ್ಲಿ ನಡೆದಿದೆ.

     ಕೃತ್ಯ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಭಾನುವಾರ ರಾತ್ರಿ ಮೂವರು ಯುವಕರು ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಬಾಲಕಿಯ ಮೇಲೆ ಮೂವರು ಆರೋಪಿಗಳು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಸಾರ್ವಜನಿಕರ ಮಾಹಿತಿ ಆಧಾರಿಸಿ ಕಾಡುಗೋಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ಡೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link