ಹಂಪಿ ಉತ್ಸವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕರ್ಷಿಸಬೇಕು : ಲಕ್ಷ್ಮಣ ಸವದಿ

ಬೆಂಗಳೂರು

    ಮುಂಬರುವ ಜನವರಿ 10 ಮತ್ತು 11 ರಂದು ನಡೆಯಲಿರುವ ಹಂಪಿ ಉತ್ಸವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ರೀತಿಯಲ್ಲಿ ಆಯೋಜಿಸಬೇಕೆಂದು ಉಪ ಮುಖ್ಯಮಂತ್ರಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಹಂಪಿ ಉತ್ಸವದ ಪೂರ್ವಭಾವಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು .ಈ ಬಾರಿಯ ಹಂಪಿ ಉತ್ಸವ ವಿಜಯನಗರದ ಅರಸ ಶ್ರೀಕೃಷ್ಣದೇವರಾಯ ಅವರ ಪಟ್ಟಾಭಿμÉೀಕದ ದಿನವಾದ ಜನವರಿ 10 ರಂದು ಹಮ್ಮಿಕೊಳ್ಳಲಾಗಿದ್ದು, ವಿಜಯನಗರ ಸಾಮ್ರಾಜ್ಯದ ಸಾಂಸ್ಕತಿಕ ಶ್ರೀಮಂತಿಕೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.

    ಹೊರ ರಾಜ್ಯದ ಕಲಾವಿದರು, ರಾಷ್ಟ್ರೀಯ ಮತ್ತು ಅಂತರ್‍ರಾಷ್ಟ್ರೀಯ ಕಲಾವಿದರಿಗೆ ಅವಕಾಶ ನೀಡುವ ಜೊತೆಯಲ್ಲಿ ಸ್ಥಳೀಯ ಕಲಾವಿದರಿಗೂ ಸಹ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ವೈವಿಧ್ಯಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜನವರಿ 10 ರಂದು ಮಾನ್ಯ ಮುಖ್ಯಮಂತ್ರಿಗಳು ಹಂಪಿ ಉತ್ಸವವನ್ನು ಉದ್ಭಾಟಿಸಲಿದ್ದು, ಜನವರಿ 11 ರ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ಸಂಸ್ಕøತಿ ಸಚಿವರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.

     ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಹಾಗೂ ಸಕ್ಕರೆ ಖಾತೆ ಸಚಿವ ಸಿ.ಟಿ. ರವಿ ಅವರು ಮಾತನಾಡಿ ಮಹಿಳಾ ಸ್ವ-ಸಹಾಯ ಸಂಘಗಳನ್ನು ಬಳಸಿಕೊಳ್ಳುವಂತೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ವೈಭವಪೂರಿತವಾಗಿ ಹಮ್ಮಿಕೊಳ್ಳಲು ಅಗತ್ಯವಿರುವ ಅನುದಾನಕ್ಕಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ಸಭೆಗೆ ತಿಳಿಸಿದರು.

     ಸಭೆಯಲ್ಲಿ ಹಂಪಿ ಉತ್ಸವ ಕುರಿತ ಪ್ರಚಾರದ ಭಿತ್ತಿ ಚಿತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಆನಂದ್‍ಸಿಂಗ್, ನಾಗೇಂದ್ರ, ಕೆ. ಸಿ. ಕೊಂಡಯ್ಯ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಪರ ಜಿಲ್ಲಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap