ಬೆಂಗಳೂರು
ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ನಡೆಸುವ ವಿಚಾರಣೆ ವೇಳೆ ಭೂಗತ ಪಾತಕಿ ರವಿ ಪೂಜಾರಿ ಮಗಳ ಬಗ್ಗೆ ಹೆಚ್ಚು ಚಿಂತಾಕ್ರಾಂತನಾಗಿರುವುದು ಪತ್ತೆಯಾಗಿದೆ.
ಸಿಸಿಬಿ ಅಧಿಕಾರಿಗಳು ವಿಚಾರಣೆಯಲ್ಲಿ ಕೇಳುವ ಪ್ರಶ್ನೆಗಳು ಮಾಹಿತಿಗಿಂತ ಸೆನೆಗಲ್ ದೇಶದಲ್ಲಿ ಪದವಿ ಓದುತ್ತಿರುವ ಮಗಳ ಭವಿಷ್ಯದ ಬಗ್ಗೆಯೇ ಹೆಚ್ಚು ರವಿಪೂಜಾರಿ ತಲೆಕೆಡೆಸಿಕೊಂಡಿದ್ದು ತಮ್ಮ ಮಗಳ ಭವಿಷ್ಯದ ಬಗ್ಗೆಯೇ ಚಿಂತಿಸುತ್ತಿದ್ದು ವಿಚಾರಣೆಗೆ ಸರಿಯಾಗಿ ಸಹರಿಸುತ್ತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊನೆಯ ವರ್ಷದ ಪದವಿಯನ್ನು ವ್ಯಾಸಂಗ ಮಾಡುತ್ತಿರುವ ಪುತ್ರಿ ಪರೀಕ್ಷೆಯ ಸಿದ್ಧತೆಯಲ್ಲಿದ್ದಾಳೆ ಸೆನೆಗಲ್ ಜೈಲಿನಲ್ಲಿದ್ದಾಗ ತಂದೆಯನ್ನು ನೋಡಬೇಕು ಎನ್ನಿಸಿದಾಗಲೆಲ್ಲ ಜೈಲಿಗೆ ಬಂದು ಮಾತನಾಡಿಸಿಕೊಂಡು ಹೋಗುತ್ತಿದ್ದಳು ಇದರಿಂದ ನನ್ನ ಮಗಳ ಓದಿಗೆ ಯಾವುದೇ ಅಡ್ಡಿ ಆತಂಕ ಇರಲಿಲ್ಲ..
ಕರ್ನಾಟಕ ಪೊಲೀಸರು ನನ್ನನ್ನು ಜೈಲಿನಿಂದ ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತಂದಿರುವುದರಿಂದ ಮಗಳ ಜೊತೆ ಮಾತನಾಡವುದು ಹಾಗೂ ನೋಡುವುದು ಸಾಧ್ಯವಾಗುತ್ತಿಲ್ಲ ಎಂದು ರವಿ ಪೂಜಾರಿ ನೋವು ತೋಡಿಕೊಂಡಿದ್ದಾನೆ.ನಾನು ಬೆಂಗಳೂರು ಪೊಲೀಸರ ವಶದಲ್ಲಿರುವುದು ಆಕೆಗೆ ಗೊತ್ತಾಗಿದ್ದು ಅದೇ ಕೊರಗಿನಲ್ಲಿ ಸರಿಯಾಗಿ ಓದದೆ,ತಯಾರಿ ನಡೆಸದೇ ಪರೀಕ್ಷೆಯಲ್ಲಿ ಫೇಲಾಗ ಬಹುದು ಎನ್ನುವ ಆತಂಕವನ್ನು ವಿಚಾರಣೆ ವೇಳೆ ರವಿ ಪೂಜಾರಿ ವ್ಯಕ್ತಪಡಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಶಾಸಕರಾದ ತನ್ವೀರ್ ಸೇಠ್, ಹೆಚ್‌ಎಂ ರೇವಣ್ಣ, ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ರವಿ ಪೂಜಾರಿ ಜೀವ ಬೆದರಿಕೆ ಹಾಕಿ ಹಣದ ಬೇಡಿಕೆ ಇಟ್ಟಿದ್ದ ಪ್ರಕರಣ ಸೇರಿ ಮಲ್ಪೆ ಮೂಲದ ರವಿ ಪೂಜಾರಿ ವಿರುದ್ಧ ಮಂಗಳೂರಿನಲ್ಲಿ 39, ಬೆಂಗಳೂರಿನಲ್ಲಿ 38 ಕೇಸ್ ದಾಖಲಾಗಿವೆ.
ಸೆನೆಗಲ್ ದೇಶದಲ್ಲಿ ಕಳೆದ ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದ ರವಿ ಪೂಜಾರಿಯನ್ನು ಭಾರತಕ್ಕೆ ಹಸ್ತಾಂತರ ಮಾಡಲು ಆಗಿನಿಂದಲೇ ಪ್ರಯತ್ನಗಳು ನಡೆದಿತ್ತು. ಆದರೆ ಉಭಯ ದೇಶಗಳ ಮಧ್ಯೆ ಹಸ್ತಾಂತರ ಒಪ್ಪಂದ ಏರ್ಪಡದ ಹಿನ್ನೆಲೆಯಲ್ಲಿ ರವಿ ಪೂಜಾರಿ ಹಸ್ತಾಂತರ ವಿಳಂಬವಾಗಿತ್ತು.
ಕಳೆದ ವಾರ ಹಸ್ತಾಂತರ ಪ್ರಕ್ರಿಯೆಗೆ ಇದ್ದ ತೊಡಕುಗಳು ನಿವಾರಣೆ ಆದ ಹಿನ್ನೆಲೆಯಲ್ಲಿ ಕೊಲೆ, ಸುಲಿಗೆ, ಜೀವ ಬೆದರಿಕೆ ಪ್ರಕರಣಗಳಲ್ಲಿ ಕಳೆದ 30 ವರ್ಷಗಳಿಂದ ಪೊಲೀಸರಿಗೆ ಬೇಕಿದ್ದ ಭೂಗತ ಲೋಕದ ಪಾತಕಿ ರವಿ ಪೂಜಾರಿಯನ್ನು ಫೆ.24ರಂದು ಬೆಂಗಳೂರಿಗೆ ಕರೆ ತಂದು ಮಡಿವಾಳದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








