ಬೆಂಗಳೂರು
ವಿಧಾನಮಂಡಲ ಜಂಟಿ ಅಧಿವೇಶನವನ್ನು ಈ ತಿಂಗಳಾಂತ್ಯದ ವೇಳೆಗೆ ಕರೆಯಲಿದ್ದು, ದಿನಾಂಕ ನಿಗದಿ ಅಧಿಕಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ವಿವೇಚೆಗೆ ಬಿಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಬಹುತೇಕ ಫೆಬ್ರವರಿ 8 ರಂದು ಬಜೆಟ್ ಮಂಡನೆಯಾಗಲಿದೆ.
ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಜಂಟಿ ಅಧಿವೇಶನದ ದಿನಾಂಕ ನಿಗದಿ ಮಾಡಿ ನಂತರ ರಾಜ್ಯಪಾಲರಿಗೆ ಮನವಿ ಮಾಡಲಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ