ರೆಡ್ಡಿಹಳ್ಳಿ ಗೋಕಟ್ಟೆ ಅಭಿವೃದ್ಧಿಯಲ್ಲಿ ತೊಡಗಿದ ಕೂಲಿ ಕಾರ್ಮಿಕರು

ಚಳ್ಳಕೆರೆ

    ರಾಜ್ಯ ಸರ್ಕಾರ ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಈಗಾಗಲೇ ಘೋಷಿಸಿದ್ದು, ಇಲ್ಲಿನ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ತಮ್ಮ ಕೂಲಿಕಾಗಿ ವಲಸೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲೇ ಕಾಮಗಾರಿಗಳ ಅನುಷ್ಠಾನಕ್ಕೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

    ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ ಮಾರ್ಗದರ್ಶನದಲ್ಲಿ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಳೆದ ಕೆಲವು ದಿನಗಳಿಂದ ಗ್ರಾಮೀಣ ಭಾಗಗಳಲ್ಲಿ ಕೆರೆ ಏರಿ ದುರಸ್ಥಿ, ಹೂಳು ತೆಗೆಯುವುದು, ಕಾಲುವೇ ನಿರ್ಮಾಣ, ಗೋಕಟ್ಟೆ ಅಭಿವೃದ್ಧಿ ಮುಂತಾದ ಅಭಿವೃದ್ಧಿ ಕಾಮಗಾರಿಗಳನ್ನು ಈಗಾಗಲೇ ಪ್ರಾರಂಭಿಸಿದ್ದು, ನೂರಾರು ಕೂಲಿ ಕಾರ್ಮಿಕರು ಈ ಯೋಜನೆಯ ಕಾಮಗಾರಿಯಲ್ಲಿ ಪಾಲ್ಗೊಂಡು ತಮ್ಮ ನಿತ್ಯದ ಬದುಕಿಗಾಗಿ ಕೂಲಿ ಹಣವನ್ನು ಸಂಪಾದಿಸುವತ್ತ ಈ ಯೋಜನೆ ಹೆಚ್ಚು ಉಪಯುಕ್ತವಾಗಿದೆ ಎನ್ನಲಾಗಿದೆ.

       ಈ ಹಿನ್ನೆಲೆಯಲ್ಲಿ ಗೋಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿಹಳ್ಳಿ ಗ್ರಾಮದ ಬಳಿ ಗೋಕಟ್ಟೆ ಅಭಿವೃದ್ಧಿ ಕಾಮಗಾರಿಯನ್ನು ಅಂದಾಜು 3 ಲಕ್ಷ ವೆಚ್ಚದಲ್ಲಿ ಕೈಗೊಂಡಿದ್ದು, ಕಳೆದ ಎರಡು ದಿನಗಳಿಂದ ಪ್ರತಿನಿತ್ಯ 250ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಈ ಕಾಮಗಾರಿಯಲ್ಲಿ ತೊಡಗಿದ್ಧಾರೆಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಲಾ ತಿಳಿಸಿದ್ಧಾರೆ. ಸೋಮವಾರ ಗೋಕಟ್ಟೆ ನಿರ್ಮಾಣದ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಗೋಕಟ್ಟೆ ಅಭಿವೃದ್ಧಿ ಕಾಮಗಾರಿ ಇನ್ನೂ ಕೆಲವು ದಿನಗಳ ಕಾಲ ಮುಂದುವರೆದಿದ್ದು, ಇನ್ನೂ ಹೆಚ್ಚಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಇಲ್ಲಿನ ಜನರಿಗೆ ಹೆಚ್ಚಿನ ಮಾನವ ದಿನಗಳನ್ನು ನಿರ್ಮಿಸಲು ಯೋಜಿಸಲಾಗಿದೆ ಎಂದರು.

       ಗೋಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೋಪನಹಳ್ಳಿ, ಅಡವಿಚಿಕ್ಕೇನಹಳ್ಳಿ, ರೆಡ್ಡಿಹಳ್ಳಿ ಮುಂತಾದ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಕೆಲವೆಡೆ ಹೆಚ್ಚು ಹೆಚ್ಚು ಮಾನವ ದಿನಗಳನ್ನು ನಿರ್ಮಾಣ ಮಾಡುವಂತಹ ಯೋಜನೆಯನ್ನು ಸಿದ್ದ ಪಡಿಸಲಾಗಿದೆ. ಹಂತ ಹಂತವಾಗಿ ಆಯಾ ಗ್ರಾಮಗಳ ಕಾಮಗಾರಿ ಅನುಷ್ಠಾನ ಸಂದರ್ಭದಲ್ಲಿ ವ್ಯಾಪಕ ಪ್ರಚಾರ ನಡೆಸಲಾಗುವುದು. ಗ್ರಾಮೀಣ ಭಾಗದ ಜನರೇ ನೇರವಾಗಿ ಈ ಕಾಮಗಾರಿಯಲ್ಲಿ ಪಾಲ್ಗೊಳ್ಳಲು ಆದ್ಯತೆ ನೀಡಲಾಗಿದೆ.

       ಯಾವುದೇ ಕಾರಣಕ್ಕೂ ಗ್ರಾಮೀಣ ಭಾಗದ ಜನರು ಗ್ರಾಮಗಳನ್ನು ತೊರಿಯದಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಕಾಮಗಾರಿ ಅನುಷ್ಠಾನ ನಿಲ್ಲದಂತೆ ಎಚ್ಚರಿ ವಹಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಕಾಮಗಾರಿಗಳ ಅಭಿವೃದ್ಧಿ ಪ್ರಗತಿಯಲ್ಲಿದೆ. ಈ ಭಾಗದ ಯಾವುದೇ ಕೂಲಿ ಕಾರ್ಮಿಕರಿಗೆ ಕೂಲಿ ಪಡೆಯಲು ಸಾಧ್ಯವಾಗದಿದ್ದಲ್ಲಿ ಕಾಮಗಾರಿಯಲ್ಲಿ ಪಾಲ್ಗೊಳ್ಳಲು ಅಡಚಣೆ ಉಂಟಾಗದಲ್ಲಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಆಗಮಿಸಿ ಮಾಹಿತಿ ನೀಡುವಂತೆ ಅವರು ಕೋರಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link