ಮಹಿಳೆಯರು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ

ತುಮಕೂರು

    ಮಹಿಳೆಯರು ಮನೆಯಿಂದ ಹೊರಬಂದು ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ಸಂಘಟಿತರಾಗಿ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ ಹ ರಮಾಕುಮಾರಿ ಹೇಳಿದರು.

    ನಗರದ ಕನ್ನಡ ಭವನದಲ್ಲಿ ನಡೆದ ಅಖಿಲ ಭಾರತ ಕವಯತ್ರಿಯರ ಸಮ್ಮೇಳನ, ಎಐಪಿಸಿಯ 20ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

      ಅಖಿಲ ಭಾರತ ಕವಯತ್ರಿಯರ ಸಮ್ಮೇಳನ ಅಂತರಾಷ್ಟ್ರೀಯ ಮಟ್ಟದ ಸಂಘಟನೆ, ಹೊರ ರಾಜ್ಯ, ಹೊರ ದೇಶಗಳಲ್ಲೂ ಸಂಘಟನೆ ಸಾಹಿತ್ಯ ಕಾರ್ಯಕ್ರಮ ರೂಪಿಸುತ್ತದೆ, ಸದಸ್ಯರನ್ನು ಅಲ್ಲಿಗೆ ಕರೆದೊಯ್ಯವ ವ್ಯವಸ್ಥೆ ಮಾಡುತ್ತದೆ, ನಮ್ಮ ಕವಯತ್ರಿಯರು ಅಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

     ಹೊರ ರಾಜ್ಯ, ದೇಶಗಳ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಕನ್ನಡದ ಲೇಖಕಿಯರು ಭಾಗವಹಿಸಿ, ಪರಭಾಷಿಕರಿಗೂ ಕನ್ನಡ ಸಾಹಿತ್ಯದ ಪರಿಚಯ ಮಾಡಬೇಕು. ಸಾಧ್ಯವಾದರೆ ಕನ್ನಡದ ಕವಿತೆಗಳನ್ನು ಬೇರೆ ಭಾಷೆಗೆ ಅನುವಾದಿಸಿ ಓದಿದರೆ ಆ ಭಾಷೆಯವರಿಗೂ ಅರ್ಥವಾಗಿ ಕನ್ನಡ ಸಾಹಿತ್ಯದ ಪರಿಚಯ ಅವರಿಗೂ ಆಗುತ್ತದೆ ಎಂದು ಹೇಳಿದರು.

       ನಿವೃತ್ತ ಉಪನ್ಯಾಸಕಿ ಬಿ ಎಂ ಪ್ರೇಮ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರು ಮನೆ ಕೆಲಸ ಕಾರ್ಯಗಳ ನಡುವೆ ಬಿಡುವು ಮಾಡಿಕೊಂಡು ಇಂತಹ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮತ್ತಷ್ಟು ಸಕ್ರಿಯರಾಗಬೇಕು ಎಂದು ಹೇಳಿದರು.ಎಐಪಿಸಿ ರಾಜ್ಯಾಧ್ಯಕ್ಷೆ ಡಾ. ವಿಜಯಲಕ್ಷ್ಮಿ ಕೋಸಗಿ, ಮಂಜುಳಾದೇವಿ, ಸುಮಾ ಶ್ರೀಹರ್ಷ, ಅರ್ಪಣ ಮೊದಲಾದವರು ಭಾಗವಹಿಸಿದ್ದರು.ನಂತರ ನಡೆದ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕವಯತ್ರಿಯರು ಸ್ವರಚಿತ ಕವನ ವಾಚನ ಮಾಡಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link