ಬೆಂಗಳೂರು
ಸಚಿವ ಸಂಪುಟ ವಿಸ್ತರಣೆ ಅತೀ ಶೀಘ್ರದಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ .ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಂಚರಾಜ್ಯಗಳ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದಾರೆ, ಸಮಯ ನೋಡಿಕೊಂಡು ಸಂಪುಟ ವಿಸ್ತರಣೆ ಕುರಿತು ಮಾತುಕತೆಗೆ ದೆಹಲಿಗೆ ತೆರಳಲಾಗುವುದು, ಖಾಲಿ ಇರುವ ಆರು ಸಚಿವ ಸ್ಥಾನಗಳನ್ನು ಈ ಭಾರಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.
ಮೈಸೂರಿನ ಕೆಆರ್‍ಎಸ್ ನಲ್ಲಿ ಡಿಸ್ನಿಲ್ಯಾಂಡ್ ಯೋಜನೆ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ತಜ್ಞರ ಜೊತೆ ಮಾತನಾಡಿ ಯೋಜನೆ ವಿರೋಧಿಸುವವರ ಆತಂಕ ನಿವಾರಿಸಲಿ ಎಂದು ಸಲಹೆ ನೀಡಿದರು.