ಮಂಗಳೂರು
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ ಹಿನ್ನೆಲೆಯಲ್ಲಿ ತೀರ್ಪನ್ನು ಖಂಡಿಸಿ ಮಂಗಳೂರು ಎಸ್ ಡಿಪಿಐ ದಕ ಜಿಲ್ಲಾ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ನಿರತ ಪಕ್ಷದ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಚಾರ್, ಕಾರ್ಪೋರೇಟರ್ ಮುನೀಬ್ ಬೆಂಗರೆ ಮೊದಲಾದವರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡರು.
ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ತೀರ್ಪು ಹಿನ್ನೆಲೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. 6 KSRP, 8 CAR ತುಕಡಿಗಳ ಸಹಿತ ವಿವಿಧೆಡೆ ಪೊಲೀಸರ ನಿಯೋಜನೆ ಮಾಡಲಾಗಿತ್ತು. ವಾಹನ ತಪಾಸಣೆಗಳನ್ನು ಬಿಗಿಗೊಳಿಸಲಾಗಿತ್ತು.ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ತೀರ್ಪು ಹೊರ ಬೀಳುತ್ತಿದ್ದಂತೆ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








