ಬೆಂಗಳೂರು
ಉಪ ಚುನಾವಣೆಯಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಇನ್ನೂ ಮೂರುವರೆ ವರ್ಷಗಳ ಕಾಲ ನಮ್ಮ ಸರ್ಕಾರ ಸುಭದ್ರವಾಗಿರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಯಲಹಂಕ ಉಪನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಮತ್ತು 400 ಕೋಟಿ.ರೂ. ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾನು ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು ಎಲ್ಲಾ ಕ್ಷೇತ್ರಗಳಲ್ಲೂ ಎರಡೆರಡು ಸಲ ಪ್ರಚಾರ ಮಾಡಿದ್ದೇವೆ. ಆದ್ದರಿಂದ 13 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ. ಮೂರೂವರೆ ವರ್ಷ ಸ್ಥಿರ ಸರ್ಕಾರ ಕೊಡುತ್ತೇವೆ. ಪ್ರತಿಪಕ್ಷಗಳೂ ಸಹಕಾರ ಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು. ಅಲ್ಲದೆ ಮೂರೂವರೆ ವರ್ಷದ ಬಳಿಕ ಮತ್ತೆ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಅಧಿಕಾರಕ್ಕೆ ಏರುವುದಾಗಿಯೂ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಮುನ್ನ ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಗಳು ಕಂಡುಬರಲಿದೆ ಎಂದಿದ್ದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಉಲ್ಲೇಖಿಸಿದ ಯಡಿಯೂರಪ್ಪ ಅಂತಹಾ ಬದಲಾವಣೆಗಳು ಆಗುವುದಿಲ್ಲ. ನಾವು ಅಧಿಕಾರದಲ್ಲಿ ಮುಂದುವರಿದರೆ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿರಲಿದೆ ಅಷ್ಟೇ ಬದಲಾವಣೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ