1.12 ಕೆ.ಜಿ ಚಿನ್ನ ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು

ಬೆಂಗಳೂರು

        ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಿ 37.5 ಲಕ್ಷ ಮೌಲ್ಯದ 1.ಕೆಜಿ12 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

        ಮಂಗಳೂರಿನ ಯುವಕನೊಬ್ಬ 572 ನಂಬರಿನ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾಗ ಒಳ ಉಡುಪಿನಲ್ಲಿ 553 ಗ್ರಾಂ ಚಿನ್ನ ಸಾಗಿಸುತ್ತಿದ್ದ. ಅನುಮಾನ ಬಂದು ಪರಿಶೀಲಿಸಿದಾಗ ಅವನ ಒಳುಡುಪಿನಲ್ಲಿ ಚಿನ್ನದ ಪೇಸ್ಟ್ ಪತ್ತೆಯಾಗಿದೆ.ಮತ್ತೊಂದು ಪ್ರಕರಣದಲ್ಲಿ ಸೌದಿ ಅರೆಬಿಯಾಗೆ ಪ್ರಯಾಣ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ 50 ವರ್ಷದ ವ್ಯಕ್ತಿಯ ಬ್ಯಾಗ್‍ನಲ್ಲಿ 566 ಗ್ರಾಂ ಚಿನ್ನ ಪತ್ತೆಯಾಗಿದೆ.

         ಇದರ ಮೊತ್ತ 18.75 ಲಕ್ಷವಾಗಿದೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 37.5 ಲಕ್ಷ ಮೌಲ್ಯದ 1.12 ಕೆಜಿ ಚಿನ್ನವನ್ನು ಕೆಐಎಎಲ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಟ್ಟಡಕ್ಕೆ ಬೆಂಕಿ

           ಬಸವನಗುಡಿಯ ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ರಾಜೇಶ್ವರಿ ಹೆಸರಿನ ಕಟ್ಟಡದ ನಾಲ್ಕನೇ ಮಹಡಿಗೆ ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ನಾಲ್ಕನೇ ಮಹಡಿಯಲ್ಲಿನ ನಿರ್ಮಲ ಟ್ರಾವೆಲ್ಸ್‍ನ ಕಚೇರಿಗೆ ಬುಧವಾರ ರಾತ್ರಿ 7ರ ಸುಮಾರಿನಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಆಕಸ್ಮಿಕ ಬೆಂಕಿ ತಗುಲಿ ಹೊಗೆ ಬೆಂಕಿ ಹೊರಬರಲಾರಂಭಿಸಿದೆ ಅಗ್ನಿ ತೀವ್ರತೆ ನೀಡಿದ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ತಕ್ಷಣವೇ ನಾಲ್ಕು ಅಗ್ನಿಶಾಮಕ ವಾಹನಗಳು ಬಂದು ಬೆಂಕಿ ನಂದಿಸಿವೆ.

         ಕಚೇರಿಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಬೆಂಕಿಯಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link