ಮಾನವ ಕಳ್ಳ ಸಾಗಾಣಿಕೆ: ಆರೋಪಿ ಬಂಧನ

ಬೆಂಗಳೂರು

    ಮಲೇಷ್ಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ಪಂಜಾಬ್ ಮೂಲದ ಮೂವರನ್ನು ಮಾನವ ಕಳ್ಳ ಸಾಗಾಣೆ ಮಾಡುತ್ತಿದ್ದ ಪಂಜಾಬ್ ಮೂಲದ ಆರೋಪಿಯೊಬ್ಬ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

    ಬಂಧಿತ ಆರೋಪಿಯನ್ನು ಪಂಜಾಬ್‍ನ ಅಮೃತ್‍ಸರ ಮೂಲದ ರಾಜ್‍ಕುಮಾರ್(26) ಎಂದು ಗುರುತಿಸಲಾಗಿದೆ. ಬಂಧಿತನು ಕಳ್ಳ ಸಾಗಾಣೆ ಮಾಡುತ್ತಿದ್ದ ಪಂಜಾಬ್‍ನ ಮೂವರು ಯುವಕರನ್ನು ಪೊಲೀಸರು ರಕ್ಷಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ರಾಜ್‍ಕುಮಾರ್ ಮಾನವ ಕಳ್ಳಸಾಗಣೆ ಮಾಡುವುದನ್ನೇ ದಂಧೆಯನ್ನಾಗಿಸಿಕೊಂಡಿದ್ದ. ಬಡವರನ್ನು ಗುರಿಯಾಗಿಸಿಕೊಂಡು ಆರೋಪಿ ವಿದೇಶದಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡುತ್ತಿದ್ದ ಕೆಲಸ ಕೊಡಿಸಲು ಲಕ್ಷಗಟ್ಟಲೇ ಹಣ ಪಡೆಯುತ್ತಿದ್ದ. ಅದರಂತೆ ಪಂಜಾಬ್ ಮೂಲದ ಮೂವರು ಯುವಕರಿಂದ ತಲಾ .70 ಸಾವಿರ ಪಡೆದಿದ್ದ. ಮೂವರು ಯುವಕರನ್ನು ಆರೋಪಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲೇಷ್ಯಾಕ್ಕೆ ವಿಮಾನ ಹತ್ತಿದ್ದರು.

    ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಮಾನ ನಿಲ್ದಾಣ ಪೊಲೀಸರು ಮೂವರು ಯುವಕರನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ರಾಜ್‍ಕುಮಾರ್ ವಿರುದ್ಧ ದೇಶದ ಹಲವೆಡೆ ಮಾನವ ಕಳ್ಳಸಾಗಾಣೆ ಪ್ರಕರಣಗಳಿವೆ. ಜೈಲಿಗೆ ಹೋಗಿ ಬಂದರೂ ದಂಧೆಯನ್ನು ಬಿಟ್ಟಿರಲಿಲ್ಲ.

      ವಿದೇಶಕ್ಕೆ ಹೋದ ಅಮಾಯಕರನ್ನು ಮನೆ ಕೆಲಸ, ಬಾರ್‍ಗಳಲ್ಲಿ ಕೆಲಸಕ್ಕೆ ಸೇರಿಸುತ್ತಿದ್ದ. ವಿದೇಶಕ್ಕೆ ಹೋದವರು ಪುನಃ ಭಾರತಕ್ಕೆ ಬರಲು ಆಗುತ್ತಿರಲಿಲ್ಲ. ಹಣದ ಆಸೆಗೆ ಈ ರೀತಿ ಕೃತ್ಯ ಎಸಗುತ್ತಿದ್ದ. ಈತನ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link