ಕಾರವಾರ:
ಜಲ್ಲೆಯ ಅಂಕೋಲಾ ಬಳಿಯಲ್ಲಿ ಸುಗಮಾ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಗೋವಾಕ್ಕೆ ಹೋಗುತಿದ್ದ ಬಸ್ಸಿಗೂ ಮಂಗಳೂರಿಗೆ ತೆರಳುತ್ತಿದ್ದ ಲಾರಿಗೂ. ಈ ವೇಳೆ ಅಂಕೋಲಾ ತಾಲೂಕಿನ ಆಂದ್ಲೆ ಬಳಿ ವೇಗವಾಗಿ ಬಂದು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿವೆ.
ಅಪಘಾತದ ರಭಸಕ್ಕೆ ಚಾಲಕ ಬಸ್‍ನಲ್ಲೇ ಸಿಲುಕಿಕೊಂಡಿದ್ದು, ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸದ್ಯ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
