ಹೊಸಹಳ್ಳಿ 10 ಕೆಜಿ ಗಾಂಜಾ ವಶ

ಮಧುಗಿರಿ

        ಪಾಳು ಬಿದ್ದ ಮನೆಯೊಂದರ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಒಬ್ಬ ಆರೋಪಿಯನ್ನು ಮಾಲು ಸಮೇತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

        ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹೊಸಹಳ್ಳಿ ಗ್ರಾಮದ ಪಾಳು ಬಿದ್ದ ಮನೆಯೊಂದರಲ್ಲಿ ಸುಮಾರು 10 ಕೆಜಿಯಷ್ಟು ಗಾಂಜಾ ಗಿಡಗಳನ್ನು ಬೆಳೆದಿದ್ದ ಸತೀಶ (35) ನನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ರಂಗಪ್ಪ (55) ಪರಾರಿಯಾಗಿದ್ದಾನೆ. ಸ್ಥಳಕ್ಕೆ ತಹಸೀಲ್ದಾರ್ ತಿಪ್ಪೇಸ್ವಾಮಿ ಭೇಟಿ ನೀಡಿದ್ದರು.

         ಕಾರ್ಯಾಚರಣೆಯಲ್ಲಿ ಪಿಎಸ್‍ಐ ಪುರುಷೋತ್ತಮ್, ಎಎಸ್‍ಐ ಪ್ರಕಾಶ್, ಸಿಬ್ಬಂದಿ ಸಂಜೀವರಾಜು, ಜಾನಕಿರಾಮ್, ರವಿಕುಮಾರ್, ರವಿ, ನಾಗರಾಜು ಮತ್ತಿತರರು ಇದ್ದರು. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link