ಹರಿಹರ:
ಹತ್ತನೇ ತರಗತಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಹೆಬ್ಬಾಗಲು, ಇದು ತೆರೆದರೆ ಮಾತ್ರ ಮುಂದಿನ ಜೀವನ ಸುಸೂತ್ರವಾಗಿ ಸಾಗಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಹೊರವಲಯದಲ್ಲಿರುವ ಗುತ್ತೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 10ನೇ ತರಗತಿಯ ಮಕ್ಕಳಿಗೆ ಆಯೋಜಿಸಿಲಾದ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮವ್ನನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಕಲಿಕಾ ಗುಣಮಟ್ಟದ ಪ್ರಗತಿಯನ್ನು ಗಮನಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು . 10 ನೇ ತರಗತಿ ಪ್ರತಿಯೊಬ್ಬ ವಿದ್ಯಾರ್ಥಿಯಜೀವನದ ಹೆಬ್ಬಾಗಲು. ಇದುತೆರೆದರೆ ಮಾತ್ರ ಮುಂದಿನ ಜೀವನ ಸುಸೂತ್ರವಾಗಿ ಸಾಗಲು ಸಾಧ್ಯ .ಆದ್ದರಿಂದ ಪ್ರತಿಯೋರ್ವ ವಿದ್ಯಾರ್ಥಿಶ್ರದ್ಧೆಯಿಂದ ಓದಿ ತನ್ನ ಭವಿಷ್ಯಕ್ಕೆ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು ಎಂದರು.
ಎಸ್‍ಕೆಡಿಆರ್‍ಡಿಪಿ ತಾಲೂಕಿನ ಯೋಜನಾಧಿಕಾರಿಗಳಾದ ರಾಘವೇಂದ್ರ. ಬಿ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲೆಯ ಮಕ್ಕಳು ಮತ್ತು ಭೋದಕ ವರ್ಗ ನೀಡಿದ ಸಹಕಾರದೊಂದಿಗೆ ವಿಶೇಷ ತರಗತಿ ಯಶಸ್ವಿಯಾಗಿ ನಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಫಲಿತಾಂಶಕೂಡ ಉತ್ತಮ ರೀತಿಯಲ್ಲಿ ದೊರೆತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳಿಗೆ ಭೋಧನಾ ವ್ಯವಸ್ಥೆ ಇದ್ದರೂ ಮಕ್ಕಳಲ್ಲಿ ಕಲಿಕಾ ಆಸಕ್ತಿ ಕಡಿಮೆ ಇರುವುದನ್ನು ಗಮನಿಸಿ ಅಂತಹ ಮಕ್ಕಳಿಗೆ ವಿಶೇಷ ತರಗತಿ ನೀಡಿದರೆ ಅವರ ಕಲಿಕಾ ಗುಣಮಟ್ಟ ಸುಧಾರಿಸಲು ಪೂಜ್ಯರು ಈ ಕಾರ್ಯಕ್ರಮವನ್ನು ಸಮಾಜಕ್ಕೆ ನೀಡಿದ್ದಾರೆ. ಈ ತರಬೇತಿಯನ್ನು ಸದುಪಯೋಗ ಮಾಡಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಸಿದ್ದಪ್ಪರವರು, ಮೇಲ್ವಿಚಾರಕರಾದ ಸಂಗೀತ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನಯನ, ಮಂಜುಳಾ ಸೇವಾಪ್ರತಿನಿಧಿ ಅಮೃತಾ ಹಾಗೂ ಶಾಲೆಯ ನಿರ್ವಹಣಾ ಸಮಿತಿ ಸದಸ್ಯರಾದ ಹನುಮಂತಪ್ಪ. ಎಚ್, ನಾಗರಾಜಪ್ಪ, ಬಿ.ಪಿ ಮಂಜುನಾಥ, ನಿರ್ಮಲಮ್ಮ, ಶಬಾನಾ ಬಾನು ಮತ್ತು ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.