ವೀಲ್ಹಿಂಗ್ ಮಾಡುತ್ತಿದ್ದ 12 ಮಂದಿ ಬಂಧನ

ಬೆಂಗಳೂರು

    ವೀಲ್ಹಿಂಗ್ ಮಾಡುತ್ತಿದ್ದ 12 ಮಂದಿ ಯುವಕರನ್ನು ಗ್ರಾಮಾಂತರ ಪೋಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹೆಸರುಘಟ್ಟ , ರಸ್ತೆಯಲ್ಲಿ ತಡರಾತ್ರಿ ಮಫ್ತಿಯಲ್ಲಿ ಕಾರ್ಯಚರಣೆ ನಡೆಸಿದ ಗ್ರಾಮಾಂತರ ಪೋಲೀಸರು ಬೈಕ್‍ನಲ್ಲಿ ವೀಲ್ಹಿಂಗ್ ಮಾಡುತ್ತಿದ್ದ 15ಕ್ಕೂ ಹೆಚ್ಚು ಬೈಕ್ ಸವಾರರನ್ನು ಬೆನ್ನಟ್ಟಿ ಹಿಡಿದು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

   ನೈಸ್ ರಸ್ತೆ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲಿ ಯುವಕರು ವೀಲ್ಹಿಂಗ್ ಮಾಡುತ್ತಾ ವಾಹನ ಚಾಲಕರು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಸಂಬಂಧ ಬಂಧ ದೂರುಗಳ ಹಿನ್ನಲೆಯಲ್ಲಿ ಗ್ರಾಮಾಂತರ ಪ್ರದೇಶದ ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಗ್ರಾಮಾಂತರ ಎಸ್‍ಪಿ ರವಿ ಚೆನ್ನಣ್ಣನವರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link