ಬೆಂಗಳೂರು
ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಕ್ಲಬ್ ಮೇಲೆ ಅಕ್ರಮವಾಗಿ ದಾಳಿ ನಡೆಸಿ 13 ಜನರನ್ನು ಬಂಧಿಸಲಾಗಿದೆ ಎನ್ನುವ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ಸಿಸಿಬಿ ಅಧಿಕಾರಿಗಳು ಅಕ್ರಮವಾಗಿ ದಾಳಿ ನಡೆಸಿದ್ದಾರೆ ಎಂದು ಜಿತೇಶ್ ಎಂಬುವರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ನ್ಯಾಯಾಲಯದ ಮೊರೆ ಹೋಗಿದ್ದರು ನ್ಯಾಯಾಲಯದ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಕಳೆದ ಮಾ.24ರಂದು ಸಿಸಿಬಿ ಇನ್ಸ್ಪೆಕ್ಟರ್ ರಮೇಶ್ ನೇತೃತ್ವದ ತಂಡದ ಬಸವೇಶ್ವರ ನಗರದ ಮೆಂಬರ್ಸ್ರಿಕ್ರಿಯೇಷನ್ ಮೇಲೆ ದಾಳಿ ನಡೆಸಿ ಜೂಜಾಟ ಆರೋಪದಡಿ 13 ಜನರನ್ನು ಬಂಧಿಸಿದ್ದರು. ಆದರೆ ಸಿಸಿಬಿ ಅಕ್ರಮವಾಗಿ ಬಂಧಿಸಿದೆ ಎಂದು ಸಿಸಿಬಿ ಇನ್ಸ್ಪೆಕ್ಟರ್ ರಮೇಶ್, ಪ್ರಕಾಶ್ ಹಾಗೂ ಸಬ್ ಇನ್ಸ್ಪೆಕ್ಟರ್ ಅಶ್ವತ್ಥಯ್ಯ ವಿರುದ್ಧ ಜಿತೇಶ್ಎಂಬುವರು ನ್ಯಾಯಾಲಯದ ಮೆಟ್ಟಿಲೇರಿದ್ದರು.ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯ ಸಿಸಿಬಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







