ಬೆಂಗಳೂರು: 144 ಸೆಕ್ಷನ್ ಜಾರಿ ..!!!

ಬೆಂಗಳೂರು :

    ಪ್ರಸಕ್ತ ನಡೆಯುತ್ತಿರುವ ರಾಜಕೀಯಬಿಕ್ಕಟ್ಟಿನಿಂದ ತಲೆದೋರಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆ ಕಾಲ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡುತ್ತಿದ್ದು, 5 ಜನಕ್ಕಿಂತ ಜಾಸ್ತಿ ಜನ ಒಂದು ಕಡೆ ಸೇರುವಂತಿಲ್ಲ, ಪ್ರತಿಭಟನೆ ಮಾಡುವಂತಿಲ್ಲ ಎಂದರು.ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ, ಇಂದು ಮತ್ತು ಬುಧವಾರ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಬಾರ್ ,ವೈನ್ ಸ್ಟೋರ್ ಪಬ್ ಗಳನ್ನು ಬಂದ್ ಮಾಡಲು ಸೂಚನೆ ನೀಡಿದ್ದು, ಎರಡು ದಿನ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ 144 ಜಾರಿಮಾಡಿದ್ದೇವೆ ಇದನ್ನು, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

 

Recent Articles

spot_img

Related Stories

Share via
Copy link
Powered by Social Snap