ಬೆಂಗಳೂರು:
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಮುಂಜಾಗೃತ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿಷೇಧಾಜ್ಞೆ ಹೇರಲಾಗಿದೆ.
ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಹೇರಲಾಗಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಹಾಸನ ಸೇರಿದಂತೆ ರಾಜ್ಯದ ಆಯಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
