ದಾವಣಗೆರೆ:

ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏ.21ರ ಸಂಜೆ 6 ರಿಂದ ಏ.23 ರ ಮಧ್ಯರಾತ್ರಿ ವರೆಗೆ ಶುಷ್ಕ ದಿನವೆಂದು ಘೋಷಿಸಲಾಗಿದೆ. ಅಲ್ಲದೆ, ಏ.24 ರವರೆಗೆ ಸಿಆರ್‍ಪಿಸಿ ಕಲಂ 144 ಸೆಕ್ಷನ್ ಜಾರಿಯಲ್ಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ದಾರೆ.
ಮತಗಟ್ಟೆಯ 200 ಮೀಟರ್ ವ್ಯಾಪ್ತಿಯ ಹೊರಗೆ ರಾಜಕೀಯ ಪಕ್ಷಗಳು/ಅಭ್ಯರ್ಥಿಗಳು ತೆರೆಯುವ ಅನಧಿಕೃತ ಗುರುತಿನ ಚೀಟಿ ನೀಡುವ ಸ್ಥಳದಲ್ಲಿ ಹೆಚ್ಚಿನ ಜನರು ಗುಂಪು ಸೇರಲು ಅವಕಾಶ ಇರುವುದಿಲ್ಲ. ಹಾಗೂ ಆ ಸ್ಥಳದಲ್ಲಿ ಪೋಸ್ಟರ್, ಬಾವುಟ, ಚಿಹ್ನೆ ಅಥವಾ ಇತರೆ ಪ್ರಚಾರ ಸಾಮಗ್ರಿಗಳನ್ನು ಪ್ರದರ್ಶಿಸುವಂತಿಲ್ಲ. ಅಲ್ಲದೇ ಆ ಸ್ಥಳದಲ್ಲಿ ಯಾವುದೇ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡಲು ಅಕವಾಶವಿಲ್ಲ ಎಂದು ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಎಲ್ಲಾ ಮತದಾರರಿಗೆ ಭಾವಚಿತ್ರವಿರುವ ವೋಟರ್ ಸ್ಲಿಪ್‍ಗಳನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಈಗಾಗಲೇ ಮೂಲಕ ವಿತರಿಸಲಾಗಿದೆ. ಹಾಗೂ ಎಲ್ಲಾ ರೀತಿಯ ಅಗತ್ಯ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಮತದಾರರು ನಿರ್ಭೀತ ಹಾಗೂ ನ್ಯಾಯಸಮ್ಮತವಾಗಿ ಮತದಾನ ಮಾಡಲು ಅನುವಾಗುವಂತೆ ಸಕಲ ಸಿದ್ದತೆ ಮಾಡಲಾಗಿದ್ದು, ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಂಡು ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
