ಕಾರವಾರ:
ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್ (ಜೆಎಂಬಿ) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ ಮೇರೆಗೆ ರಾಜ್ಯ ಇಬ್ಬರು ವ್ಯಕ್ತಿಗಳನ್ನು ರಾಜ್ಯ ಆಂತರಿಕ ಭದ್ರತಾ ಪಡೆ ಹಾಗೂ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಶಿರಸಿ ಮೂಲದ ವ್ಯಕ್ತಿ ಹಾಗೂ ಬನವಾಸಿಯ ನಿವಾಸಿಯಾಗಿರುವ ಇಬ್ಬರು ವ್ಯಕ್ತಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆಂದು ತಿಳಿದುಬಂದಿದೆ.
ಶಿರೂರು ಮದರಸಾ ಟೀಚರ್ ಜೆಎಂಬಿ ಉಗ್ರರ ಚಟುವಟಿಕೆಗಳಿಗೆ ಸಾಥ್ ಕೊಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಮದರಸಾ ಟೀಚರ್ ಮತಿನ್‌ನನ್ನು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ. ಈತನ ಬಳಿಯಿದ್ದ 9 ಸಿಮ್‌ಗಳನ್ನು ಭಯೋತ್ಪಾದಕ ಸಂಘಟನೆಯ ನೇಮಕಾತಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂದು ಹೇಳಲಾಗುತ್ತಿದ್ದು, ಈ ಕುರಿತು ತನಿಖೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
