ತುಮಕೂರು : 2 ನಿರಾಶ್ರಿತರ ಕೇಂದ್ರ ಸ್ಥಾಪನೆ ಮಾಡಲಾಗಿದೆ :ಜಿಲ್ಲಾಧಿಕಾರಿ

ತುಮಕೂರು

     ನಗರದಲ್ಲಿ ಲಾಕ್ ಡೌನ್ ಇರುವ ಹಿನ್ನಲೆಯಲ್ಲಿ ನಿರಾಶ್ರಿತರು ಹಾಗೂ ವಲಸೆ ಕಾರ್ಮಿಕರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು  ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

     ತುಮಕೂರಿನಲ್ಲಿರುವ ಕೂಲಿ ಕಾರ್ಮಿಕರು ಮತ್ತು ನಿರಾಶ್ರಿತರಿಗಾಗಿ  2 ನಿರಾಶ್ರಿತರ  ಕೇಂದ್ರಗಳನ್ನು ಈಗಾಗಲೇ ತೆರೆಯಲಾಗಿದ್ದು, ಈ ಕೇಂದ್ರಗಳಲ್ಲಿ 122 ಜನರು ಇದ್ದು ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು , ಅಲ್ಲದೇ 1506 ಜನ ವಲಸೆ ಕಾರ್ಮಿಕರನ್ನು ಗುರುತಿಸಿದ್ದು,ಇವರಿಗೆ ಸಂಬಂಧಿಸಿದ ಕಂಟ್ರಾಕ್ಟರ್ ಗಳ ಮೂಲಕ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap