ಚಳ್ಳಕೆರೆ
ತಾಲ್ಲೂಕಿನಾದ್ಯಂತ ಶುಕ್ರವಾರ ಬೆಳಗಿನ ಜಾವ ಉತ್ತಮ ಹದ ಮಳೆಯಾಗಿದ್ದು, ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಮನೆಗಳು ಸಹ ಕುಸಿದು ಬಿದ್ದಿವೆ.
ತಾಲ್ಲೂಕಿನ ಕಸಬಾ ಹೋಬಳಿ ರಾಮಜೋಗಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಅದೇ ಗ್ರಾಮದ ಹನುಮಂತರಾಯಪ್ಪ ಮತ್ತು ಕುರುಡಿಹಳ್ಳಿ ಗ್ರಾಮದ ಬೊಮ್ಮಕ್ಕ ಎಂಬುವವರ ವಾಸದ ಮನೆಗಳು ಮಳೆ ನೀರಿನಿಂದ ಕುಸಿದು ಬಿದಿದ್ದು, ಸುಮಾರು 30 ಸಾವಿರಕ್ಕೂ ಹೆಚ್ಚು ನಷ್ಟ ಸಂಭವಿಸಿರುತ್ತದೆ.
ರಾಮಜೋಗಿಹಳ್ಳಿ ಗ್ರಾಮದ ಬಿ.ನಾಗೇಂದ್ರಚೌಧರಿಯವರ ರಿ.ಸರ್ವೆ ನಂ 57ರ ಎರಡು ಎಕರೆ, ಐಯಣ್ಣರೆಡ್ಡಿ ಎಂಬುವವರ ಎರಡು ಎಕರೆ ಪ್ರದೇಶದಲ್ಲಿದ್ದ ಮೆಕ್ಕೆಜೋಳ ಸಂಪೂರ್ಣವಾಗಿ ನೀರಿನಲ್ಲಿ ಮುಳಗಿಹೋದ ಪರಿಣಾಮವಾಗಿ ಸುಮಾರು 40 ಸಾವಿರಕ್ಕೂ ಹೆಚ್ಚು ನಷ್ಟ ಸಂಭವಿಸಿರುತ್ತದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
