ಬೆಂಗಳೂರು:
ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಮತ್ತು ಈ ಸಂಬಂಧ ಅಗತ್ಯ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದ ಮನವಿಯನ್ನು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಸೊರಬ ತಾಲೂಕಿನ ಆನವಟ್ಟಿಯ ಸಿಆರ್‌ಪಿ ರಾಜು, ತಿಮ್ಮಾಪುರ ಸರ್ಕಾರಿ ಶಾಲೆಯ ಶಿಕ್ಷಕ ಢಾಕ್ಯಾನಾಯ್ಕ ಅಮಾನತುಗೊಂಡವರು. ಇವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಸೋಮವಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
