ಬೆಂಗಳೂರು
ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಬೆಂಗಳೂರು ನಗರದಲ್ಲಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಶಿವಾಜಿನಗರದ ಬ್ರಾಡ್‍ವೇ ಆಸ್ಪತ್ರೆ ಸಜ್ಜಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಇನ್ನೂರು ಹಾಸಿಗೆಗಳ ಸೌಲಭ್ಯ ದೊರೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನದ ಡಾ. ಸುಧಾ ಮೂರ್ತಿ ನೇತೃತ್ವದಲ್ಲಿ ಈ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಕೋವಿಡ್ ಕೇರ್ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಸಂಕಷ್ಟ ಸಂದರ್ಭದಲ್ಲಿ ಸೂಕ್ತ ನೆರವು ನೀಡಿದ ಇನ್‍ಫೋಸಿಸ್ ಪ್ರತಿಷ್ಠಾನಕ್ಕೆ ರಾಜ್ಯ ಸರ್ಕಾರ ಆಭಾರಿಯಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು ಮುಂದಾಗಿದ್ದು, ಕೊರೊನಾದತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಆಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸಲು ತೀರ್ಮಾನಿಸಿರುವ ಈ ವೈದ್ಯರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಾನವೀಯತೆ ಮೆರೆಯುತ್ತಿರುವ ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಅತ್ಯಂತ ಶ್ಲಾಘನೀಯ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ