ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ : 2020ರ ಕೆಪಿಎಲ್ ರದ್ದು

ಬೆಂಗಳೂರು

      ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಮ್ಯಾಚ್ ಫಿಕ್ಸಿಂಗ್ ಸಂಬಂಧಿಸಿದಂತೆ ಪ್ರಮಖ ಆರೋಪಿ ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಹಾಗೂ ಮಾಜಿ ರಣಜಿ ಆಟಗಾರ ಸುಧೀರ್ ಶಿಂಧೆಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

       ಕರ್ನಾಟಕ ಕ್ರಿಕೆಟ್ ಮಂಡಳಿ(ಕೆಎಸ್‍ಸಿಎ) ಮಂಡಳಿ ಸದಸ್ಯರೂ ಆಗಿರುವ ಸುಧೀರ್‍ಶಿಂಧೆ ಅವರ ದೊಮ್ಮಲೂರು ಮುಖ್ಯರಸ್ತೆಯಲ್ಲಿರುವ ಮನೆಯ ಮೇಲೆ ಮಂಗಳವಾರ ದಾಳಿ ಮಾಡಿ ಕೆಲ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ ಬೆನ್ನಲ್ಲೇ ಬಂಧಿಸಿ ವಿಚಾರಣೆ ನಡೆಸಲಾಗಿದೆ.

      ಇಲ್ಲಿಯವರೆಗೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಆರೋಪಿಗಳು ತಮ್ಮ ಹೇಳಿಕೆಯಲ್ಲಿ ಸುಧೀಂದ್ರ ಶಿಂಧೆ ಹೆಸರು ಪ್ರಸ್ತಾಪಿಸಿದ್ದು ಅದನ್ನು ಆಧರಿಸಿ ನೋಟಿಸ್ ನೀಡಲಾಗಿತ್ತು.ಆದರೆ ಅವರು ವಿಚಾರಣೆಗೆ ಬಂದಿರಲಿಲ್ಲ.ಅವರ ಮನೆ ಮೇಲೆ ದಾಳಿ ನಡೆಸಿದ ವೇಳೆ ಮ್ಯಾಚ್‍ಫಿಕ್ಸಿಂಗ್ ನಡೆಸಿದ್ದಕ್ಕೆ ಸೂಕ್ತ ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಸುಧೀಂದ್ರ ಶಿಂಧೆಯನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ

      ಶಿಂಧೆಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಪಡೆದುಕೊಳ್ಳಲಾಗಿದ್ದು ಹೆಚ್ಚಿನ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಅವರು ಸುದ್ದಿಗಾರರಿಗೆ ತಿಳಿಸಿದರು.

      ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಪ್ರಮುಖ ಆರೋಪಿ ?ಬೆಳಗಾವಿ ಪ್ಯಾಂಥರ್ಸ್? ತಂಡದ ಮಾಲೀಕ ಅಶ್ಫಕ್ ತಾರ್ ಅಲಿ ಅವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು.ಮ್ಯಾಚ್ ಫಿಕ್ಸಿಂಗ್ ಮಾಡಲು ಶಿಂಧೆ ಸಹಾಯ ಮಾಡಿದ್ದರು ಎಂಬ ಸಂಗತಿಯನ್ನು ಅವರೇ ಬಾಯ್ಬಿಟ್ಟಿದ್ದರು.

     ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‍ಸಿಎ) ಆಡಳಿತ ಮಂಡಳಿ ಸದಸ್ಯರೂ ಆಗಿರುವ ಶಿಂಧೆ ಹಲವು ಆಟಗಾರರ ಜೊತೆ ಉತ್ತಮ ಒಡನಾಟ ಹೊಂದಿದ್ದಾರೆ. ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಮ್ಯಾಚ್ ಫಿಕ್ಸಿಂಗ್‍ಗೆ ಆಟಗಾರರನ್ನು ಸೆಳೆಯಲು ಯತ್ನಿಸಿರುವುದು ತನಿಖೆಯಿಂದ ಗೊತ್ತಾಗಿದೆ.ಕೆಲ ಆಟಗಾರರಿಂದ ಹೇಳಿಕೆ ಪಡೆಯಲಾಗಿದ್ದು,ಇನ್ನು ಕೆಲವರಿಂದ ಹೇಳಿಕೆ ಪಡೆಯುವುದು ಬಾಕಿ ಇದೆ ಎಂದರು.

     ಪ್ರಕರಣದಲ್ಲಿ ಶಿಂಧೆ ಪಾತ್ರವೇನು ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಲಾಗುತ್ತಿತ್ತು.ನೋಟಿಸ್ ನೀಡಿದರೂ ಶಿಂಧೆ ಅವರು ವಿಚಾರಣೆಗೆ ಬಾರದಿದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಮನೆ ಮೇಲೆ ದಾಳಿ ನಡೆಸಬೇಕಾಯಿತು. ದಾಳಿ ಸಂದರ್ಭದಲ್ಲೇ ಕೆಲವು ದಾಖಲೆಗಳು ಸಿಕ್ಕವು.ಅವುಗಳನ್ನೇ ಪುರಾವೆಯನ್ನಾಗಿ ಪರಿಗಣಿಸಿ ಅವರನ್ನು ಬಂಧಿಸಲಾಗಿದೆ? ಎಂದು ಹೇಳಿದರು.

      ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‍ನ ಸದಸ್ಯರಾಗಿರುವ ಸುಧೀಂದ್ರ ಶಿಂಧೆ 19 ವರ್ಷದೊಳಗಿನ ತಂಡದ ಕೋಚ್ ಆಗಿದ್ದಲ್ಲದೇ ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಕೂಡ ಆಗಿ ಕಾರ್ಯನಿರ್ವಹಿಸಿದ್ದರು.ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆ ಮಾಡಲು ಹಣ ಶಿಂಧೆ ಪಡೆಯುತ್ತಿದ್ದ ಎನ್ನುವ ಆರೋಪ ಕೂಡ ಕೇಳಿಬಂದಿದೆ.

     ತನಗೆ ಹಣ ನೀಡಿದವರನ್ನಷ್ಟೇ ಕೆಪಿಎಲ್ ಪಂದ್ಯಗಳಿಗೆ ಅವಕಾಶ ನೀಡುತ್ತಿದ್ದ ಆರೋಪಿಯು ನಗರದಲ್ಲಿ ರಾಕೆಟ್ ಕ್ಲಬ್ ನಡೆಸುತ್ತಿದ್ದು 2017ರಿಂದ ಮ್ಯಾಚ್ ಫಿಕ್ಸಿಂಗ್‍ನಲ್ಲಿ ತೊಡಗಿದ್ದು ಪ್ರಮುಖ ಬುಕ್ಕಿ ಆಲಿ ಜೊತೆ ಸಂಪರ್ಕ ಹೊಂದಿದ್ದು ಮ್ಯಾಚ್ ಫಿಕ್ಸಿಂಗ್‍ನ ಕಿಂಗ್‍ಪಿನ್ ಆಗಿದ್ದನು ಕೆಪಿಎಲ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಶಿಂಧೆ ಸೇರಿ ಇದುವರೆಗೆ 9 ಮಂದಿಯನ್ನು ಬಂಧಿಸಲಾಗಿದೆ.

ಕೆಪಿಎಲ್ ರದ್ದು

      ಈ ನಡುವೆ ಕೆಪಿಎಲ್‍ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿರುವ ಧೃಡಪಟ್ಟ ಬೆನ್ನಲ್ಲೇ ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ.ಬೆಳಗಾವಿ ಫ್ಯಾಂಥರ್ಸ್ ತಂಡದ ಕೋಚ್ ಸುಧೀಂದ್ರ ಶಿಂಧೆಯನ್ನು ಬಂಧಿಸಿ ತನಿಖೆ ತೀವ್ರಗೊಳಿಸಿರುವ ಬೆನ್ನಲ್ಲೇ 2020ರ ಕೆಪಿಎಲ್ ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ.

     ಕರ್ನಾಟಕ ಪ್ರೀಮಿಯರ್ ಲೀಗ್ ಮ್ಯಾಚ್ ಫಿಕ್ಸಿಂಕ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಿ ಹಲವರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಕಲೆಹಾಕಲಾಗುತ್ತಿದೆ .ಕೆಪಿಎಲ್‍ನಲ್ಲಿ ಅಕ್ರಮಗಳು ನಡೆಯುತ್ತಿರುವುದು ಸಾಬೀತಾಗಿರುವುದರಿಂದ 2020ರ ಕೆಪಿಎಲ್ ಪಂದ್ಯಾವಳಿಯನ್ನು ರದ್ದು ಮಾಡಲು ಕೆಎಸ್‍ಸಿಎ ಮುಂದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link