ಕಲಬುರಗಿ:
ಚಿಂಚೋಳಿಯಿಂದ ಸೊಲ್ಲಾಪುರಕ್ಕೆ ಹೊರಟಿದ್ದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಇಂದು ಬೆಳಿಗ್ಗೆ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 25 ಜನರು ಗಾಯಗೊಂಡ ಘಟನೆ ಜಿಲ್ಲೆಯ ಚಿಂಚೋಳಿ ಶುಗರ್ ಮಿಲ್ ಆ್ಯಂಡ್ ಬಯೋ ಇಂಡಸ್ಟ್ರೀಸ್ ಬಳಿ ನಡೆದಿದೆ
ಬಸ್ಸಿನ ಸ್ಟೀಯರಿಂಗ್ ತುಂಡಾದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್ ಚಾಲಕ ಸೇರಿದಂತೆ 25 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಒಟ್ಟು ಆರು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಬಸ್ ನಿಲ್ದಾಣದಿಂದ ಹೊರಟ ಮೂರು ಕಿ.ಮೀ. ಅಂತರದಲ್ಲಿಯೇ ಈ ಅವಘಡ ಸಂಭವಿಸಿದೆ.ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಬ್ ಇನಸ್ಪೆಕ್ಟರ್ ರಾಜಶೇಖರ ರಾಠೋಡ ಹಾಗೂ ಮೊದಲಾದವರು ಭೇಟಿ ನೀಡಿ, ಪರಿಶೀಲಿಸಿದರು. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ