ಬೆಂಗಳೂರು
ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ತಲೆಮರೆಸಿಕೊಂಡಿರುವ ಇಬ್ಬರು ಮಹಿಳೆಯರು ಸೇರಿ ಮೂವರಿಗಾಗಿ ತೀವ್ರ ಶೋಧ ನಡೆಸಿದ್ದಾರೆ
ವಿಜಯನಗರದ ಪಟ್ಟೆಗಾರಪಾಳ್ಯದ ದಿನೇಶ್ (40), ಗಿರೀಶ್ (35), ಅಗ್ರಹಾರ ದಾಸರಹಳ್ಳಿಯ ಸುನಿಲ್ (25) ಬಂಧಿತ ಆರೋಪಿಗಳಾಗಿದ್ದು, ದಂಧೆಯಲ್ಲಿ ಪಾಲ್ಗೊಂಡಿದ್ದ ರೂಪ, ಲಲಿತ ಹಾಗೂ ಗೋಪಿನಾಥ್ ನಾಯ್ಡು ಅವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಆರೋಪಿಗಳು ಹೊರರಾಜ್ಯದಿಂದ ಯುವತಿಯರನ್ನು ಕರೆತಂದು ಅಗ್ರಹಾಸ ದಾಸರಹಳ್ಳಿಯ ಬಾಲಾಜಿ ರೆಸಿಡೆನ್ಸಿ ಇಂಟರ್ ನ್ಯಾಷನಲ್ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಖಚಿತ ಮಾಹಿತಿಯ ಮೇರೆಗೆ ಲಾಡ್ಜ್ ಮೇಲೆ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿ, 4,200 ನಗದು, 4 ಮೊಬೈಲ್ಗಳನ್ನು ವಶಪಡಿಸಿಕೊಂಡು, ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ದಂಧೆಯ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








