ಚಿತ್ರದುರ್ಗ;
ಇತ್ತೀಚಿಗೆ ನಗರದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇಲ್ಲಿನ ಚಿಕ್ಕಪೇಟೆಯ ವಾಸಿ ಎಸ್.ಕೆ.ನವೀನ್ ಎಂಬುವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಲಬ್ಯವಾದ ಮಾಹಿತಿಯ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಮೂವರನ್ನು ಬಂಧಿಸಲು ಜಾಲ ಬೀಸಲಾಗಿದೆ ಎಂದು ಎಸ್ಪಿ ಡಾ.ಅರುಣ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು
ಪ್ರಕರಣದ ವಿವರ;
ಇಲ್ಲಿನ ಚಿಕ್ಕಪೇಟೆಯ ಬಸವೇಶ್ವರ ನಗರದ 1 ನೇ ಕ್ರಾಸ್‍ನಲ್ಲಿ ವಾಸವಾಗಿದ್ದ ನವೀನ್.ಎಸ್.ಕೆ.(26) ಎಂಬುವರನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಚಿತ್ರದುರ್ಗ ನಗರವೃತ್ತ ನಿರೀಕ್ಷಕ ಪ್ರಕಾಶಗೌಡ ಪಾಟೀಲ ಮತ್ತು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯ ಪಿ.ಎಸ್.ಐ. ಪರಮೇಶ್ ಹಾಗೂ ಸಿಬ್ಬಂದಿ ತಂಡ ಕೊಲೆ ತನಿಖೆ ನಡೆಸಿದ್ದು, ಮೃತ ನವೀನ್‍ನೊಂದಿಗೆ ಸಂಪರ್ಕದಲ್ಲಿದ್ದ ಬೆಂಗಳೂರಿನ ಅಕ್ಷಯ ಎಂಬುವವನ ಮೇಲೆ ಅನುಮಾನಗೊಂಡು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು
ವಿಚಾರಣೆ ವೇಳೆ ಮೃತ ನವೀನ್‍ನ ಪತ್ನಿಯೊಂದಿಗೆ ಪ್ರೀತಿಯ ಬಲೆಗೆ ಸಿಲುಕಿರುವುದು ಬೆಳಕಿಗೆ ಬಂದಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ವೈಷಮ್ಯ ಬೆಳೆದು ಆರೋಪಿ ಅಕ್ಷಯ್ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಆತನನ್ನು ಕೊಲೆ ಮಾಡಿದ್ದಾರೆಂದು ಎಸ್ಪಿ ವಿವರಿಸಿದರು
ಪ್ರಕರಣದ ಆರೊಪಿಗಳ ಪೈಕಿ ಬೆಂಗಳೂರಿನ ಅಕ್ಷಯ್ ಕುಮಾರ್, ಎಂ.ಎಸ್.ಕಿರಣ್ ಹಾಗೂ ಕೃಷ್ಣ ಎಂಬುವರನ್ನು ಬಂಧಿಸಲಾಗಿದೆ. ಉಳಿದ ಮೂವರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಹೇಳಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








