ಬೆಂಗಳೂರು
ನಗರದ ಕೆಆರ್‍ಪುರಂ,ವೈಟ್‍ಫೀಲ್ಡ್ ಹಾಗೂ ದೇವನಹಳ್ಳಿಯ ಸಂಭವಿಸಿರುವ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃಪಟ್ಡಿದ್ದಾರೆ.
ಟಿಸಿ ಪಾಳ್ಯದ ಅತ್ತುಲ್ ಬರ್ಮನ್ (37) ವೈಟ್‍ಫೀಲ್ಡ್‍ನ ಪರಮೇಶ್ವರನ್(38) ಹಾಗೂ ಬಿಹಾರ ಮೂಲದ ನಿರಂಜನ್ ನಾಯಕ (50) ಎಂದು ಗುರುತಿಸಲಾಗಿದೆ.
ಕೆಆರ್ ಪುರಂನ ಭಟ್ಟರಹಳ್ಳಿ ಬಳಿ ವೇಗವಾಗಿ ಬಂದ ಲಗೇಜ್ ವಾಹನ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಅತುಲ್ ಬರ್ಮನ್ ಗಾರೆ ಕೆಲಸ ಮಾಡುತ್ತಿದ್ದು, ಭಾನುವಾರ ರಾತ್ರಿ 8.30ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಬೈಕ್‍ನಲ್ಲಿ ಭಟ್ಟರಹಳ್ಳಿ ಮೇಡಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಅಪೆ ಲಗೇಜ್ ವಾಹನ ಡಿಕ್ಕಿ ಹೊಡೆದಿದೆ.
ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬರ್ಮನ್‍ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾನೆ.ಪ್ರಕರಣ ದಾಖಲಿಸಿರುವ ಕೆಆರ್ ಪುರ ಸಂಚಾರ ಪೆÇಲೀಸರು ಲಗೇಜ್ ವಾಹನ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಯುವಕ ಸಾವು
ವೈಟ್‍ಫೀಲ್ಡ್‍ನ ಬಿಗ್‍ಬಜಾರ್ ಬಳಿ ಭಾನುವಾರ ಮಧ್ಯಾಹ್ನ 3.15ರ ವೇಳೆ ಬುಲೆಟ್ ಬೈಕ್‍ನಲ್ಲಿ ಹೋಗುತ್ತಿದ್ದ ತಮಿಳುನಾಡು ಮೂಲದ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು , ಹಿಂದಿನಿಂದ ಬಂದ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಗ್ರಾಫಿಕ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪರಮೇಶ್ವರನ್, ವೈಟ್‍ಫೀಲ್ಡ್‍ನ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದ್ದು, ಅಪಘಾತವೆಸಗಿ ಪರಾರಿಯಾಗಿರುವ ವಾಹನಕ್ಕಾಗಿ ಪ್ರಕರಣ ದಾಖಲಿಸಿರುವ ವೈಟ್‍ಫೀಲ್ಡ್ ಸಂಚಾರ ಪೆÇಲೀಸರು ತೀವ್ರ ಶೋಧ ನಡೆಸಿದ್ದಾರೆ.
ಪಾದಚಾರಿ ಸಾವು
ದೇವನಹಳ್ಳಿಯ ಡಾಬಾ ಗೇಟ್ ಬಳಿ ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದ ಬಿಹಾರ ಮೂಲದ ಕೂಲಿ ಕಾರ್ಮಿಕರೊಬ್ಬರು ಟಾಟಾ ಈಚರ್ ವಾಹನ ಹರಿದು ಮೃತಪಟ್ಟಿದ್ದಾರೆ.
ಡಾಬಾ ಗೇಟ್ ಬಳಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಗಾರೆ ಕೆಲಸ ಮಾಡಿಕೊಂಡು ಅಲ್ಲೇ ವಾಸಿಸುತ್ತಿದ್ದ ನಿರಂಜನ್ ನಾಯಕ ಅವರು ರಾತ್ರಿ 8ರ ವೇಳೆ ಡಾಬಾ ಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ ಈಚರ್ ವಾಹನ ಹರಿದು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಕರಣ ದಾಖಲಿಸಿರುವ ದೇವನಹಳ್ಳಿ ಸಂಚಾರ ಪೆಲೀಸರು ಈಚರ್ ವಾಹನ ಚಾಲಕ ದತ್ತಾತ್ರೇಯನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ