ಬೆಂಗಳೂರು
ಬಿಎಂಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‍ಗೆ ಬೆಂಕಿ ಹೊತ್ತಿ ಉರಿದು ಪ್ರಯಾಣಿಕರು ಪಾರಾಗಿರುವ ದುರ್ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಹಾರೋಹಳ್ಳಿಯ ಬಸವರಾಜ್ ಮಡಿವಾಳದ ಪ್ರದೀಪ್ ಹಾಗೂ ಅವಿನಾಶ್ ಎಂದು ಮೃತಪಟ್ಟ ಬೈಕ್ ಸವಾರರನ್ನು ಗುರುತಿಸಲಾಗಿದೆ.
ಕಗ್ಗಲೀಪುರ ಹಾಗೂ ಕುಂಬಳಗೂಡು ಮಾರ್ಗ ಮಧ್ಯದ ದೇವಗೆರೆ ಸಮೀಪದಲ್ಲಿ ಅಪಘಾತ ನಡೆದಿದ್ದು, ಬಸ್‍ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಸವರಾಜ್, ಪ್ರದೀಪ್ ಹಾಗೂ ಅವಿನಾಶ್ ಪಲ್ಸರ್ ಬೈಕ್‍ನಲ್ಲಿ ಸೋಮವಾರ ರಾತ್ರಿ ಕಗ್ಗಲೀಪುರದಿಂದ ಕುಂಬಳಗೂಡು ವೇಗವಾಗಿ ಹೋಗುತ್ತಾ ಮುಂದಿದ್ದ ಲಾರಿಯನ್ನು ಹಿಂದಿಕ್ಕಲು ಮುಂದಾಗಿದ್ದಾರೆ,ಈ ವೇಳೆ ಎದುರಿನಿಂದ ಕುಂಬಳಗೂಡು ಕಡೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ ಬಸ್ ಎಂಜಿನ್‍ಗೂ ಬೆಂಕಿ ತಗುಲಿ ಸವಾರರು ಮಾರುದ್ದ ಹಾರಿಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿ ಭಾರೀ ಅನಾಹುತ ತಪ್ಪಿಸಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳವು ಬೆಂಕಿಯನ್ನ ನಂದಿಸಿದ್ದು ಕುಂಬಳಗೋಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ