ಬೆಂಗಳೂರು
ಕೃಷ್ಣ ಜನ್ಮಾಷ್ಠಮಿಯ ಹಿನ್ನಲೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕುಟುಂಬ ಸಮೇತ ಹೋಗಿದ್ದ ಜೆಡಿಎಸ್ ನಾಯಕಿ ನಾಗರತ್ನ ಅವರ ಮನೆಗೆ ನಿನ್ನೆ ರಾತ್ರಿ ನುಗ್ಗಿರುವ ದುಷ್ಕರ್ಮಿಗಳು 3 ಕೆಜಿ 300 ಗ್ರಾಂ ಚಿನ್ನಾಭರಣ 73 ಸಾವಿರ ರೂ. ನಗದು ದೋಚಿ ಪರಾರಿಯಾಗಿರುವ ದುರ್ಘಟನೆ ಕನಕಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕನಕಪುರದ ಪ್ರಶಾಂತ್‍ನಗರದಲ್ಲಿರುವ ನಾಗರತ್ನ ಅವರ ಮನೆಯ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿನ ವಸ್ತುಗಳನ್ನೆಲ್ಲಾ ಜಾಲಾಡಿ ಬೀರುವಿನಲ್ಲಿದ್ದ 3 ಕೆಜಿ 300 ಗ್ರಾಂ ಚಿನ್ನಾಭರಣ ಮತ್ತು 73 ಸಾವಿರ ರೂ. ನಗದು ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ನಾಗರತ್ನ ಅವರು ಕೃಷ್ಣ ಜನ್ಮಾಷ್ಠಮಿಯ ಹಿನ್ನಲೆಯಲ್ಲಿ ಮನೆಗೆ ಬೀಗ ಹಾಕಿಕೊಂಡು ಮನೆ ಮಂದಿಯೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಬೆರಳಚ್ಚು ತಜ್ಞರು ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಬಂದ ಕನಕಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








